ಕಠ್ಮಂಡು: ನೇಪಾಳದ ಆಹಾರ ತಂತ್ರಜ್ಞಾನ ಮತ್ತು ಗುಣಮಟ್ಟ ನಿಯಂತ್ರಣ ಇಲಾಖೆಯು ಎರಡು ಭಾರತೀಯ ಮಸಾಲೆ ಬ್ರಾಂಡ್ಗಳಾದ ಎವರೆಸ್ಟ್ ಮತ್ತು ಎಂಡಿಎಚ್ನ ಆಮದು, ಬಳಕೆ ಮತ್ತು ಮಾರಾಟವನ್ನು ನಿಷೇಧಿಸಿದೆ. ಈ ಮಸಾಲೆಗಳಲ್ಲಿ ಎಥಿಲೀನ್ ಆಕ್ಸೈಡ್ ಇರುವ ಕಾರಣ ಇದನ್ನು ನಿಷೇಧಿಸಲಾಗುತ್ತಿದೆ ಎಂದು ಮೂಲಗಳು ದೃಢಪಡಿಸಿದೆ.
ಉತ್ಪನ್ನಗಳಲ್ಲಿ ಹೆಚ್ಚಿನ ಮಟ್ಟದ ಎಥಿಲೀನ್ ಆಕ್ಸೈಡ್ ಕುರುಹುಗಳ ಬಗ್ಗೆ ಸುದ್ದಿಯಾದ ನಂತರ ನೇಪಾಳವು ಈ ಎರಡು ಮಸಾಲೆ ಬ್ರಾಂಡ್ಗಳನ್ನು ನಿಷೇಧಿಸಿದೆ.
“ನೇಪಾಳದಲ್ಲಿ ಆಮದು ಮಾಡಿಕೊಳ್ಳುತ್ತಿರುವ ಎವರೆಸ್ಟ್ ಮತ್ತು ಎಂಡಿಹೆಚ್ ಬ್ರಾಂಡ್ ಮಸಾಲೆಗಳನ್ನು ಆಮದು ಮಾಡಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಮಸಾಲೆಗಳಲ್ಲಿ ಹಾನಿಕಾರಕ ರಾಸಾಯನಿಕಗಳ ಕುರುಹುಗಳ ಬಗ್ಗೆ ಸುದ್ದಿ ಬಂದ ನಂತರ ಒಂದು ವಾರದ ಹಿಂದೆ ಆಮದು ನಿಷೇಧವನ್ನು ವಿಧಿಸಲಾಯಿತು ಮತ್ತು ನಾವು ಅದರ ಮಾರಾಟವನ್ನು ಸಹ ನಿಷೇಧಿಸಿದ್ದೇವೆ” ಎಂದು ನೇಪಾಳದ ಆಹಾರ ತಂತ್ರಜ್ಞಾನ ಮತ್ತು ಗುಣಮಟ್ಟ ನಿಯಂತ್ರಣ ಇಲಾಖೆಯ ವಕ್ತಾರ ಮೋಹನ್ ಕೃಷ್ಣ ಮಹಾರ್ಜನ್ ತಿಳಿಸಿದರು.
“ಈ ಎರಡು ನಿರ್ದಿಷ್ಟ ಬ್ರಾಂಡ್ಗಳ ಮಸಾಲೆಗಳಲ್ಲಿ ರಾಸಾಯನಿಕಗಳ ಪರೀಕ್ಷೆಗಳು ನಡೆಯುತ್ತಿವೆ. ಅಂತಿಮ ವರದಿ ಬರುವವರೆಗೆ ನಿಷೇಧವು ಜಾರಿಯಲ್ಲಿರುತ್ತದೆ. ಹಾಂಗ್ ಕಾಂಗ್ ಮತ್ತು ಸಿಂಗಾಪುರವು ಈಗಾಗಲೇ ಇದನ್ನು ನಿಷೇಧಿಸಿದೆ, ಅವರ ಕ್ರಮದ ನಂತರ ನಮ್ಮ ಕ್ರಮ ಬಂದಿದೆ” ಎಂದು ಮಹಾರ್ಜನ್ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.