ನವದೆಹಲಿ: ಕರ್ಗಿಸ್ಥಾನದಲ್ಲಿ ಅಂತರರಾಷ್ಟ್ರೀಯ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುಂಪು ಹಿಂಸಾಚಾರಗಳು ನಡೆಯುತ್ತಿರುವ ವರದಿಗಳು ಬರುತ್ತಿವೆ. ಅದರಲ್ಲೂ ಭಾರತ, ಪಾಕಿಸ್ಥಾನ, ಬಾಂಗ್ಲಾ ವಿದ್ಯಾರ್ಥಿಗಳು ಟಾರ್ಗೆಟ್ ಆಗುತ್ತಿದ್ದಾರೆ ಎನ್ನಲಾಗಿದೆ. ಈಗಾಗಲೇ ಸ್ಥಳಿಯರು ನಡೆಸಿದ ಹಿಂಸಾಚಾದಲ್ಲಿ ನಾಲ್ವರು ಪಾಕಿಸ್ಥಾನಿಗಳು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಕಿರ್ಗಿಸ್ತಾನ್ನ ಬಿಷ್ಕೆಕ್ನಲ್ಲಿರುವ ತಮ್ಮ ವಿದ್ಯಾರ್ಥಿಗಳಿಗೆ ಮನೆಯೊಳಗೆ ಇರುವಂತೆ ಭಾರತ ಮತ್ತು ಪಾಕಿಸ್ಥಾನ ಸಲಹೆ ನೀಡಿದೆ.
ಶುಕ್ರವಾರ ಬಿಷ್ಕೆಕ್ನಲ್ಲಿ ವಿದೇಶಿ ವಿದ್ಯಾರ್ಥಿಗಳ ವಿರುದ್ಧ ಗುಂಪು ಹಿಂಸಾಚಾರ ಭುಗಿಲೆದ್ದಿದೆ ಎಂದು ಭಾರತ, ಪಾಕಿಸ್ಥಾನಗಳ ರಾಯಭಾರ ಕಚೇರಿ ತಿಳಿಸಿದೆ, ಸ್ಥಳೀಯರು ಪಾಕಿಸ್ತಾನಿ, ಭಾರತೀಯ ಮತ್ತು ಬಾಂಗ್ಲಾದೇಶದ ವಿದ್ಯಾರ್ಥಿಗಳು ವಾಸಿಸುವ ಹಲವಾರು ಹಾಸ್ಟೆಲ್ಗಳ ಮೇಲೆ ದಾಳಿ ಮಾಡಿದ್ದಾರೆ ಎಂದಿದೆ.
ಬಿಷ್ಕೆಕ್ನಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಯೋಗಕ್ಷೇಮಕ್ಕೆ ಭರವಸೆ ನೀಡಿದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್, ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಮತ್ತು ಈಗ ಪರಿಸ್ಥಿತಿ ಶಾಂತವಾಗುತ್ತಿದೆ ಎಂದಿದ್ದಾರೆ.
ರಾಯಭಾರ ಕಚೇರಿಯೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿರಲು ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಕಿರ್ಗಿಸ್ತಾನ್ನಲ್ಲಿರುವ ಭಾರತದ ರಾಯಭಾರ ಕಚೇರಿಯು ವಿದ್ಯಾರ್ಥಿಗಳಿಗೆ 24×7 ತುರ್ತು ಸಂಪರ್ಕ ಸಂಖ್ಯೆ- 055-571-0041 ಅನ್ನು ಬಿಡುಗಡೆ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.