ನವದೆಹಲಿ: ಛತ್ತೀಸ್ಗಢದಲ್ಲಿ ಇಂದು ಮೋಸ್ಟ್ ವಾಂಟೆಡ ನಕ್ಸಲನ ಹತ್ಯೆಯಾಗಿದೆ. 16 ಪ್ರಕರಣಗಳಿಗೆ ಸಂಬಂಧಿಸಿದಂತೆ ಬೇಕಾಗಿದ್ದ ಮತ್ತು ತಲೆ ಮೇಲೆ 1 ಲಕ್ಷ ರೂಪಾಯಿ ಬಹುಮಾನವನ್ನು ಹೊತ್ತಿದ್ದ ನಕ್ಸಲೀಯನನ್ನು ಶನಿವಾರ ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ಪೊಲೀಸರು ಎನ್ಕೌಂಟರ್ನಲ್ಲಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೋಲಂಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯ ಬಂಜರ್ಪಾರಾ ಗ್ರಾಮದ ಬಳಿಯ ಕಾಡಿನಲ್ಲಿ ಬೆಳಿಗ್ಗೆ 6.30 ರ ಸುಮಾರಿಗೆ ಗುಂಡಿನ ಚಕಮಕಿ ನಡೆದಿದ್ದು, ಪೊಲೀಸ್ ಸಿಬ್ಬಂದಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮಾವೋವಾದಿಗಳ ಕೊಂಟಾ ಪ್ರದೇಶ ಸಮಿತಿಯ ಕಾರ್ಯದರ್ಶಿ ವೆಟ್ಟಿ ಮಂಗ್ಡು ಮತ್ತು ಪ್ರದೇಶ ಕಮಾಂಡ್-ಇನ್-ಚೀಫ್ ಹಿತೇಶ್ ಸೇರಿದಂತೆ ಹಿರಿಯ ನಕ್ಸಲೀಯರು ಸೇರಿದಂತೆ 15-20 ನಕ್ಸಕ್ ಕಾರ್ಯಕರ್ತರ ಉಪಸ್ಥಿತಿಯ ಮಾಹಿತಿಯನ್ನು ಆಧರಿಸಿ ಶುಕ್ರವಾರ ರಾತ್ರಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.