ನವದೆಹಲಿ: ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ದುಃಖದ ಸಮಯದಲ್ಲಿ ಭಾರತ ಇರಾನ್ನ ಜೊತೆ ನಿಲ್ಲುತ್ತದೆ ಎಂದು ಹೇಳಿದ್ದಾರೆ.
“ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ನ ಅಧ್ಯಕ್ಷ ಡಾ. ಸೆಯದ್ ಇಬ್ರಾಹಿಂ ರೈಸಿ ಅವರ ದುರಂತ ನಿಧನದಿಂದ ತೀವ್ರ ದುಃಖ ಮತ್ತು ಆಘಾತವಾಗಿದೆ. ಭಾರತ-ಇರಾನ್ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸಲು ಅವರ ಕೊಡುಗೆ ಯಾವಾಗಲೂ ಸ್ಮರಣೀಯವಾಗಿದೆ. ಅವರ ಕುಟುಂಬ ಮತ್ತು ಇರಾನ್ ಜನತೆಗೆ ನನ್ನ ಹೃತ್ಪೂರ್ವಕ ಸಂತಾಪ. ಈ ದುಃಖದ ಸಮಯದಲ್ಲಿ ಭಾರತವು ಇರಾನ್ನೊಂದಿಗೆ ನಿಂತಿದೆ” ಎಂದು ಮೋದಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ರೈಸಿ ಅವರಿದ್ದ ಹೆಲಿಕಾಪ್ಟರ್ ನಾಪತ್ತೆಯಾದಾಗಲೂ ಮೋದಿ ಆಳವಾದ ಕಳವಳ ವ್ಯಕ್ತಪಡಿಸಿದ್ದರು, ವಿದೇಶಾಂಗ ಸಚಿವ ಹುಸೇನ್ ಅಮೀರ್-ಅಬ್ದುಲ್ಲಾಹಿಯಾನ್ ಸೇರಿದಂತೆ ಅಧ್ಯಕ್ಷರು ಮತ್ತು ಅವರ ಪರಿವಾರದ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುವುದಾಗಿ ಹೇಳಿದ್ದರು.
ಬೆಂಗಾವಲು ಪಡೆಯ ಭಾಗವಾಗಿದ್ದ ಹೆಲಿಕಾಪ್ಟರ್ನಲ್ಲಿ ಅಧ್ಯಕ್ಷ ರೈಸಿ ಮತ್ತು ವಿದೇಶಾಂಗ ಸಚಿವ ಹುಸೇನ್ ಅಮಿರಾಬ್ದೊಲ್ಲಾಹಿಯಾನ್ ಸೇರಿದಂತೆ ಇತರ ಹಿರಿಯ ನಾಯಕರು ಇದ್ದರು. ದೇಶದ ಪೂರ್ವ ಅಜರ್ಬೈಜಾನ್ ಪ್ರಾಂತ್ಯದ ಪರ್ವತ ಪ್ರದೇಶವನ್ನು ದಾಟುತ್ತಿರುವಾಗ ಕೆಟ್ಟ ಹವಾಮಾನದ ಪರಿಣಾಮ ಹೆಲಿಕಾಫ್ಟರ್ ಟೇಕ್ ಆಫ್ ಆದ ಸುಮಾರು 30 ನಿಮಿಷಗಳ ನಂತರ ಸಂಪರ್ಕ ಕಡಿತಗೊಳಿಸಿದೆ.
Deeply saddened and shocked by the tragic demise of Dr. Seyed Ebrahim Raisi, President of the Islamic Republic of Iran. His contribution to strengthening India-Iran bilateral relationship will always be remembered. My heartfelt condolences to his family and the people of Iran.…
— Narendra Modi (@narendramodi) May 20, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.