ನವದೆಹಲಿ: ಐದನೇ ಹಂತದ ಲೋಕಸಭೆ ಚುನಾವಣೆಗೆ ಇಂದು ಎಂಟು ರಾಜ್ಯಗಳ ಒಟ್ಟು 49 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಈ ಬಾರಿ 695 ಅಭ್ಯರ್ಥಿಗಳು ಕಣದಲ್ಲಿದ್ದಾರೆ, ಇದರಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷಗಳ ಹಲವಾರು ರಾಜಕೀಯ ಪ್ರಮುಖರು ಸೇರಿದ್ದಾರೆ.
ರಾಹುಲ್ ಗಾಂಧಿ ರಾಯ್ಬರೇಲಿಯಿಂದ ಸ್ಪರ್ಧಿಸುತ್ತಿರುವ ಕಾಂಗ್ರೆಸ್ಸಿನ ಪ್ರಮುಖ ನಾಯಕನಾಗಿದ್ದಾರೆ. ಗಾಂಧಿ ಕುಟುಂಬದ ಭದ್ರಕೋಟೆಯಾಗಿರುವ ರಾಯ್ಬರೇಲಿಯನ್ನು ಈ ಹಿಂದೆ ಸೋನಿಯಾ ಗಾಂಧಿ ಪ್ರತಿನಿಧಿಸಿದ್ದರು, ಅವರು ಈಗ ರಾಜ್ಯಸಭೆಗೆ ತೆರಳಿದ್ದಾರೆ. ಈ ಹಿನ್ನೆಲೆಯಲ್ಲಿ ರಾಹುಲ್ ಇಲ್ಲಿಂದ ಸ್ಪರ್ಧಿಸುತ್ತಿದ್ದಾರೆ. ಈ ಲೋಕಸಭೆ ಕ್ಷೇತ್ರಕ್ಕೆ 20 ಬಾರಿ ಚುನಾವಣೆ ನಡೆದಿದ್ದು, ಕಾಂಗ್ರೆಸ್ 17 ಬಾರಿ ಗೆದ್ದಿದೆ. ಈ ಬಾರಿ ಬಿಜೆಪಿಯು ಉತ್ತರ ಪ್ರದೇಶದ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ದಿನೇಶ್ ಪ್ರತಾಪ್ ಸಿಂಗ್ ಅವರನ್ನು ರಾಹುಲ್ ವಿರುದ್ಧ ಕಣಕ್ಕಿಳಿಸಿದೆ.
ಐದನೇ ಹಂತದಲ್ಲಿ ಅದೃಷ್ಟ ಪರೀಕ್ಷೆಗ ಇಳಿದಿರುವ ಮತ್ತೊಮ್ಮ ಪ್ರಭಾವಿ ನಾಯಕ ರಕ್ಷಣಾ ಸಚಿವ ರಾಜನಾಥ್ ಸಿಂಗ್. ಅವರು 2014 ಮತ್ತು 2019 ರ ಚುನಾವಣೆಯಲ್ಲಿ ಗೆದ್ದಿರುವ ಲಕ್ನೋದಿಂದ ಬಿಜೆಪಿಯ ಅಭ್ಯರ್ಥಿಯಾಗಿದ್ದಾರೆ. ಲಕ್ನೋ ಈಗ ಮೂರು ದಶಕಗಳಿಂದ ಬಿಜೆಪಿ ಭದ್ರಕೋಟೆಯಾಗಿದೆ, ವಾಜಪೇಯಿ ಅವರು ಸತತವಾಗಿ ಐದು ಬಾರಿ ಇಲ್ಲಿಂದ ಗೆದ್ದಿದ್ದಾರೆ
ಬಿಜೆಪಿ ಫೈರ್ಬ್ರಾಂಡ್ ನಾಯಕಿ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅಮೇಥಿಯಿಂದ ಮತ್ತೆ ಸ್ಪರ್ಧಿಸುತ್ತಿದ್ದಾರೆ, ಅಲ್ಲಿ ಅವರು 2019 ರ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅದ್ಭುತ ಗೆಲುವು ಸಾಧಿಸಿದ್ದರು. ಈ ಬಾರಿಯೂ ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ.
42 ವರ್ಷದ ಎಲ್ಜೆಪಿ ಚಿರಾಗ್ ಪಾಸ್ವಾನ್ ಬಿಹಾರದ ಹಾಜಿಪುರದಿಂದ ಸ್ಪರ್ಧಿಸುತ್ತಿದ್ದಾರೆ, ಈ ಕ್ಷೇತ್ರ ಅವರ ತಂದೆ ದಿವಂಗತ ರಾಮ್ ವಿಲಾಸ್ ಪಾಸ್ವಾನ್ ಅವರನ್ನು ಎಂಟು ಬಾರಿ ಆಯ್ಕೆ ಮಾಡಿದೆ. ಬಿಜೆಪಿ ಚಿರಾಗ್ ಪಾಸ್ವಾನ್ ಅವರ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ.
ಐದನೇ ಹಂತದಲ್ಲಿ ಕಣದಲ್ಲಿರುವ ಮತ್ತೊಬ್ಬ ಪ್ರಮುಖ ನಾಯಕ ಒಮರ್ ಅಬ್ದುಲ್ಲಾ. ಜಮ್ಮು ಮತ್ತು ಕಾಶ್ಮೀರವು ತನ್ನ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿ, ವಿಭಜಿಸಿ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿದ ನಂತರ ಮೊದಲ ಲೋಕಸಭಾ ಚುನಾವಣೆ ಅಲ್ಲಿ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಬಾರಮುಲ್ಲಾ ಕ್ಷೇತ್ರದಿಂದ ಚುನಾವಣಾ ಕಣದಲ್ಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.