ಟೆಹ್ರಾನ್: ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಅವರು ಬುಧವಾರ ಇರಾನ್ ರಾಜಧಾನಿ ಟೆಹ್ರಾನ್ಗೆ ಬಂದಿಳಿದಿದ್ದು, ಇರಾನ್ನ ಹಂಗಾಮಿ ಅಧ್ಯಕ್ಷ ಮೊಹಮ್ಮದ್ ಮೊಖ್ಬರ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಹೆಲಿಕಾಪ್ಟರ್ ಅಪಘಾತದಲ್ಲಿ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವ ಹುಸೇನ್ ಅಮೀರ್-ಅಬ್ದುಲ್ಲಾಹಿಯಾನ್ ಅವರ ದುರಂತ ನಿಧನದ ಬಗ್ಗೆ ಸಂತಾಪ ಸೂಚಿಸಿದರು.
ಅಧಿಕೃತ ಅಂತ್ಯಕ್ರಿಯೆ ಸಮಾರಂಭದಲ್ಲಿ ಭಾರತೀಯ ನಿಯೋಗವನ್ನು ಮುನ್ನಡೆಸುತ್ತಿರುವ ಜಗದೀಪ್ ಧಂಖರ್, ಅಪಘಾತದಲ್ಲಿ ಮಡಿದ ರೈಸಿ, ಅಮೀರ್-ಅಬ್ದುಲ್ಲಾಹಿಯಾನ್ ಮತ್ತು ಇತರ ಇರಾನ್ ಅಧಿಕಾರಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ರೈಸಿಯ ಗೌರವಾರ್ಥವಾಗಿ ಮಂಗಳವಾರ ಭಾರತದಾದ್ಯಂತ ಒಂದು ದಿನದ ಶೋಕಾಚರಣೆಯನ್ನು ನಡೆಸಲಾಗಿದೆ.
ಉಪ ರಾಷ್ಟ್ರಪತಿ ಧಂಖರ್ ಅವರು ಇಂದು ಟೆಹ್ರಾನ್ನಲ್ಲಿ ದಿವಂಗತ ಅಧ್ಯಕ್ಷ ರೈಸಿ, ದಿವಂಗತ ವಿದೇಶಾಂಗ ಸಚಿವ ಅಮೀರ್-ಅಬ್ದುಲ್ಲಾಹಿಯಾನ್ ಮತ್ತು ಇತರ ಇರಾನ್ ಅಧಿಕಾರಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದರು ಎಂದು ಅವರ ಕಚೇರಿಯು ಬುಧವಾರ ಕಾರ್ಯಕ್ರಮದ ಚಿತ್ರಗಳೊಂದಿಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.
Hon'ble Vice-President, Shri Jagdeep Dhankhar paid tributes to Late President Dr. Seyyed Ebrahim Raisi, Late Foreign Minister Dr. Hossein Amir-Abdollahian and other Iranian Officials in Tehran today.
VP Dhankhar also met Dr. Mohammad Mokhber, Acting President of Iran and… pic.twitter.com/Rbkd9yltWT
— Vice-President of India (@VPIndia) May 22, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.