ನವದೆಹಲಿ: ಅಶ್ಲೀಲ ವಿಡಿಯೋ ಹೊರಬಂದ ಬಳಿಕ ದೇಶ ಬಿಟ್ಟು ಪಲಾಯನ ಮಾಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಸರ್ಕಾರ ಮಾಡಿರುವ ಮನವಿಯನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕ್ರಿಯೆಗೊಳಿಸುತ್ತಿದೆ.
ಹಲವು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಪ್ರಜ್ವಲ್ ರೇವಣ್ಣ ಅವರನ್ನು ಬಂಧನಕ್ಕೀಡು ಮಾಡಲು ಎಸ್ಐಟಿ ಕಾದು ಕುಳಿತಿದೆ. ಆದರೆ ಹೊರದೇಶದಲ್ಲಿರುವ ಅವರು ಭಾರತಕ್ಕೆ ಕಾಲಿಡುವ ಸೂಚನೆಯನ್ನೇ ನೀಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರನ್ನು ಅನಿವಾರ್ಯವಾಗಿ ಭಾರತಕ್ಕೆ ಕರೆಸಿಕೊಳ್ಳುವ ಪ್ರಯತ್ನಗಳು ನಡೆಯುತ್ತಿವೆ.
ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ಹಿಂಪಡೆಯುವಂತೆ ಒತ್ತಾಯಿಸಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ವಿದೇಶಾಂಗ ಸಚಿವಾಲಯ ಪತ್ರವನ್ನು ಸ್ವೀಕರಿಸಿದೆ ಎಂದು ಅಧಿಕೃತ ಮೂಲಗಳು ಬಹಿರಂಗಪಡಿಸಿವೆ. ಅವರು ಭಾರತದಿಂದ ನಿರ್ಗಮಿಸಿದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ.
ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದಂತೆ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಪಡಿಸಲು ಕರ್ನಾಟಕ ಸರ್ಕಾರದಿಂದ ಸಚಿವಾಲಯ ಪತ್ರವನ್ನು ಸ್ವೀಕರಿಸಿದೆ, ಇದನ್ನು ಪ್ರಕ್ರಿಯೆಗೊಳಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.