ನವದೆಹಲಿ: ರಾಷ್ಟ್ರೀಯ ಹೆಮ್ಮೆ ಮತ್ತು ಏಕತೆಯನ್ನು ಸಂಕೇತಿಸಲು ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿಯ ಕಮಾನ್ ಪೋಸ್ಟ್ನಲ್ಲಿ ಭಾರತೀಯ ತ್ರಿವರ್ಣ ಧ್ವಜವನ್ನು ಹೊಂದಿರುವ 108 ಅಡಿ ಧ್ವಜಸ್ತಂಭವನ್ನು ಸ್ಥಾಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದರ ಉದ್ಘಾಟನೆಯ ನಿಮಿತ್ತ ಗುರುವಾರ ಫಲಕವನ್ನು ಅನಾವರಣಗೊಳಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಫ್ಲಾಗ್ ಫೌಂಡೇಶನ್ ಆಫ್ ಇಂಡಿಯಾದ ಮೇಜರ್ ಜನರಲ್ ಆಶಿಮ್ ಕೊಹ್ಲಿ (ನಿವೃತ್ತ), ಕಲಾಪಹಾರ್ ಬ್ರಿಗೇಡ್ ಕಮಾಂಡರ್ ಬ್ರಿಗೇಡಿಯರ್ ಕೆ ಎಸ್ ದಹಿಯಾ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉದ್ಘಾಟನಾ ಸಮಾರಂಭದಲ್ಲಿ ಶಾಲಾ ಮಕ್ಕಳು, ಸ್ಥಳೀಯರು, ಪ್ರವಾಸಿಗರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.