ನವದೆಹಲಿ: ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಮಧ್ಯಂತ ಜಾಮೀನು ಪಡೆದುಕೊಂಡು ಜೈಲಿನಿಂದ ಹೊಬಂದಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇದೀಗ ತಮ್ಮ ಜಾಮೀನನ್ನು ವಿಸ್ತರಿಸುವಂತೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಧ್ಯಂತರ ಜಾಮೀನನ್ನು ಇನ್ನೂ ಏಳು ದಿನಗಳ ಕಾಲ ವಿಸ್ತರಿಸುವಂತೆ ಕೋರಿ ಅರವಿಂದ್ ಕೇಜ್ರಿವಾಲ್ ಅವರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಲೋಕಸಭೆ ಚುನಾವಣೆಗೆ ಪ್ರಚಾರ ಮಾಡಲು ಅನುಕೂಲವಾಗುವಂತೆ ಮೇ 10 ರಂದು ಸುಪ್ರೀಂಕೋರ್ಟ್ ಅವರಿಗೆ 21 ದಿನಗಳ ಅವಧಿಗೆ ಮಧ್ಯಂತರ ಜಾಮೀನು ನೀಡಿತ್ತು.
ಆದರೆ, ಲೆಫ್ಟಿನೆಂಟ್ ಗವರ್ನರ್ ಅವರ ಅನುಮೋದನೆಯನ್ನು ಪಡೆಯಲು ಸಂಪೂರ್ಣವಾಗಿ ಅಗತ್ಯವಿಲ್ಲದಿದ್ದಲ್ಲಿ ಅವರ ಕಚೇರಿ ಅಥವಾ ದೆಹಲಿ ಸಚಿವಾಲಯಕ್ಕೆ ಭೇಟಿ ನೀಡುವುದನ್ನು ಮತ್ತು ಅಧಿಕೃತ ಕಡತಗಳಿಗೆ ಸಹಿ ಮಾಡುವುದಕ್ಕೆ ನಿರ್ಬಂಧ ವಿಧಿಸಿತ್ತು.
https://x.com/ANI/status/1794957000335339929?ref_src=twsrc%5Etfw%7Ctwcamp%5Etweetembed%7Ctwterm%5E1794957000335339929%7Ctwgr%5E08a71a3139499cd04b5517d32dc14a3e3d0e9fb1%7Ctwcon%5Es1_&ref_url=https%3A%2F%2Fwww.kannadaprabha.com%2Fnation%2F2024%2FMay%2F27%2Farvind-kejriwal-moves-supreme-court-seeks-extension-of-interim-bail-in-money-laundering-case-on-health-grounds
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.