ಮುಂಬಯಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಜಪಾನಿನ ಓಸಾಕ ಸಿಟಿ ಯೂನಿವರ್ಸಿಟಿ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ನೀಡಿ ಗೌರವಿಸಲಿದೆ. ಈ ಗೌರವವನ್ನು ಪಡೆಯುತ್ತಿರುವ ಮೊದಲ ಭಾರತೀಯ ಇವರಾಗಿದ್ದಾರೆ.
120 ವರ್ಷಗಳ ಇತಿಹಾಸವಿರುವ ಈ ಪ್ರತಿಷ್ಠಿತ ವಿಶ್ವವಿದ್ಯಾನಿಲಯ ಈ ಉನ್ನತ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಇದುವರೆಗೆ ಜಗತ್ತಿನ 10 ಗಣ್ಯರಿಗೆ ಮಾತ್ರ ನೀಡಿ ಗೌರವಿಸಿದೆ.
ಮಹಾರಾಷ್ಟ್ರದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗಾಗಿ ಫಡ್ನವಿಸ್ ಅವರು ತೆಗೆದುಕೊಂಡ ಕ್ರಮಗಳನ್ನು ಗಮನಿಸಿ ಓಸಾಕ ವಿಶ್ವವಿದ್ಯಾನಿಲಯ ಅವರಿಗೆ ಗೌರವ ಸಲ್ಲಿಸುತ್ತಿದೆ.
ಓಸಾಕ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲೂ ಅವರನ್ನು ಆಹ್ವಾನಿಸಲಾಗಿದೆ, ಇತ್ತೀಚಿಗಷ್ಟೇ ಉದ್ಯಮ, ಸಂಸ್ಕೃತಿ, ಪ್ರವಾಸೋದ್ಯಮವನ್ನು ಪ್ರಚಾರಪಡಿಸುವುದಕ್ಕಾಗಿ ಫಡ್ನವಿಸ್ ಜಪಾನ್ಗೆ ತೆರಳಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.