News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂ ಹಗರಣ, ಅಕೌಂಟೆಂಟ್‌ ಆತ್ಮಹತ್ಯೆ: ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ  ಸುಮಾರು 187 ಕೋಟಿ ರೂಪಾಯಿಗಳ ಹಗರಣ ನಡೆದಿದೆ ಎಂದು ಹೇಳಲಾಗಿದ್ದು, ಈ ಪೈಕಿ 85 ಕೋಟಿ ರೂ. ಹಣವನ್ನು ಕಾನೂನು ಬಾಹಿರವಾಗಿ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪವಿದೆ. ಈ ಹಗರಣವನ್ನು ತನ್ನ ತಲೆ ಮೇಲೆ ಕಟ್ಟಲಾಗುತ್ತದೆ ಎಂಬ ಭಯಕ್ಕೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕೌಂಟೆಂಟ್ ಇಲಾಖಾ ಸಚಿವರ ಹೆಸರನ್ನು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕೌಂಟೆಂಟ್ ಸೂಪರಿಡೆಂಟ್ ಚಂದ್ರಶೇಖರ್ ನೇಣಿಗೆ ಶರಣಾದ ಅಧಿಕಾರಿಯಾಗಿದ್ದಾರೆ. ಇವರು ನನ್ನ ಸಾವಿಗೆ ನಿಗಮದ ಅಧಿಕಾರಿಗಳು ಹಾಗೂ ಇಲಾಖೆಯ ಸಚಿವರೇ ಕಾರಣವೆಂದು ಡೆತ್ ನೋಟ್ ಬರೆದಿಟ್ಟಿರುವುದು ಪೊಲೀಸರಿಗೆ ಲಭ್ಯವಾಗಿದೆ.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವ್ಸಸ್ಥಾಪಕ ನಿರ್ದೇಶಕ ಜೆ.ಪದ್ಮನಾಭ, ಅಕೌಂಟ್ ವ್ಯವಸ್ಥಾಪಕ ಪರಶುರಾಮ್ ದುರ್ಗಣ್ಣನವರ್ ಹಾಗೂ ಯೂನಿಯನ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಶುಚಿಸ್ಮಿತ ಕಾರಣವೆಂದು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಘಟನೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದ್ದು,ಕರ್ನಾಟಕವನ್ನು ಲೂಟಿ ಮಾಡುವುದಕ್ಕೆಂದೇ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್
ಸರ್ಕಾರ, ಲೂಟಿ ಜತೆಗೆ ಅಧಿಕಾರಿಗಳ ಜೀವವನ್ನು ಬಲಿ ಪಡೆಯುತ್ತಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಲ್ಲಿ ನಡೆದ ₹187.33 ಕೋಟಿ ಹಗರಣ ಸಂಬಂಧ ಸಚಿವ ಬಿ.ನಾಗೇಂದ್ರ ಅವರು ಸೇರಿದಂತೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಿರಿಯ ಅಧಿಕಾರಿಗಳ ಹೆಸರು ಬರೆದಿಟ್ಟು ಅಕೌಂಟೆಂಟ್ ಸೂಪರಿಡೆಂಟ್ ಚಂದ್ರಶೇಖರ್ ನೇಣಿಗೆ ಶರಣಾಗಿದ್ದಾರೆ. ಹಗರಣದ ಪ್ರಮುಖ ಆರೋಪಿ ಸಚಿವ ಬಿ. ನಾಗೇಂದ್ರ ಅವರು ಈ ಕೂಡಲೇ ರಾಜೀನಾಮೆ ನೀಡಬೇಕು ಹಾಗೂ ಅವರು ಕೂಡಲೇ ಕಳಂಕಿತ ಸಚಿವರನ್ನು ಸಂಪುಟದಿಂದ ವಜಾಮಾಡಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top