ಬೆಂಗಳೂರು: ಜರ್ಮನಿಗೆ ಪಲಾಯನ ಮಾಡಿದ್ದ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ, ಜೆಡಿಎಸ್ನಿಂದ ಅಮಾನತುಗೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಶುಕ್ರವಾರ ನಸುಕಿನ ಜಾವ 1.10 ರ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ತಕ್ಷಣವೇ ಅವರನ್ನು ಎಸ್ಐಟಿ ವಶಕ್ಕೆ ಪಡೆದುಕೊಂಡಿದೆ.
ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಮಹಿಳಾ ತಂಡವು ಪೊಲೀಸ್ ಜೀಪ್ನಲ್ಲಿ ಮಧ್ಯರಾತ್ರಿ 2.02ರ ಸುಮಾರಿಗೆ ಎಸ್ಐಟಿ ಕಚೇರಿಗೆ ಕರೆತಂದಿದೆ ಎಂದು ವರದಿಗಳು ತಿಳಿಸಿವೆ.
ಪ್ರಜ್ವಲ್ ಅವರನ್ನು ಶುಕ್ರವಾರ ಬೆಳಗ್ಗೆ ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಾಗುತ್ತಿದೆ, ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಯಲಿದೆ ಎನ್ನಲಾಗಿದೆ.
ಅಲ್ಲದೇ ಇಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಅತ್ಯಾಚಾರ ಘಟನೆಗಳು ನಡೆದಿವೆ ಎಂದು ಹೇಳಲಾದ ಪ್ರಜ್ವಲ್ ರೇವಣ್ಣ ಅವರ ವಸತಿ ಗೃಹ ಮತ್ತು ಹೊಳೆನರಸೀಪುರದ ಫಾರ್ಮ್ ಹೌಸ್ಗಳಿಗೆ ಸ್ಥಳ ಮಹಜರಿಗಾಗಿ ಅವರನ್ನು ಕರೆದೊಯ್ಯಬೇಕಾಗಿರುವುದರಿಂದ ಎಸ್ಐಟಿ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲು ಕೋರ್ಟ್ಗೆ ಮನವಿ ಮಾಡಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.