ನವದೆಹಲಿ: ಲೋಕಸಭೆ ಚುನಾವಣೆಯ ಏಳನೇ ಮತ್ತು ಅಂತಿಮ ಹಂತದ ಪ್ರಚಾರ ಕೊನೆಗೊಂಡಿದೆ. ಏಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ 57 ಸಂಸದೀಯ ಕ್ಷೇತ್ರಗಳಿಗೆ ಶನಿವಾರ ಮತದಾನ ನಡೆಯುವ ಮೂಲಕ 18 ನೇ ಲೋಕಸಭಾ ಚುನಾವಣೆಯ ಸಮಾಪ್ತಿಯಾಗಲಿದೆ.
ಉತ್ತರ ಪ್ರದೇಶ ಮತ್ತು ಪಂಜಾಬ್ನಲ್ಲಿ ತಲಾ 13 ಸ್ಥಾನಗಳು, ಪಶ್ಚಿಮ ಬಂಗಾಳದಲ್ಲಿ 9, ಬಿಹಾರದಲ್ಲಿ 8, ಒಡಿಶಾದಲ್ಲಿ 6, ಹಿಮಾಚಲ ಪ್ರದೇಶದಲ್ಲಿ 4, ಜಾರ್ಖಂಡ್ನಲ್ಲಿ 3 ಮತ್ತು ಕೇಂದ್ರಾಡಳಿತ ಪ್ರದೇಶವಾದ ಚಂಡೀಗಢದಲ್ಲಿ ಒಂದು ಸ್ಥಾನಕ್ಕೆ ಕೊನೆಯ ಹಂತದಲ್ಲಿ ಚುನಾವಣೆ ನಡೆಯಲಿದೆ. ಲೋಕಸಭೆ ಚುನಾವಣೆಯ ಈ ಹಂತದಲ್ಲಿ ಒಟ್ಟು 904 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಅದೇ ದಿನ ಹಿಮಾಚಲ ಪ್ರದೇಶದ ಆರು ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ. ಒಡಿಶಾದ 42 ಸ್ಥಾನಗಳಿಗೂ ಚುನಾವಣೆ ನಡೆಯಲಿದೆ.
ವಿವಿಧ ರಾಜಕೀಯ ಪಕ್ಷಗಳ ಪ್ರಮುಖ ನಾಯಕರು ನಿನ್ನೆ ಕೊನೆಯ ಕ್ಷಣದ ಸಮಾವೇಶಗಳು ಮತ್ತು ರೋಡ್ಶೋಗಳನ್ನು ನಡೆಸಿ ಮತದಾರರನ್ನು ಸೆಳೆಯುವ ಪ್ರಯತ್ನ ನಡೆಸಿದ್ದಾರೆ.
ಪಂಜಾಬ್ನಲ್ಲಿ ಹಲವಾರು ಹಿರಿಯ ನಾಯಕರು ಮತದಾರರನ್ನು ಒಲಿಸಿಕೊಳ್ಳಲು ಕೊನೆಯ ಹಂತದ ಪ್ರಯತ್ನ ನಡೆಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಕೇಂದ್ರ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ನಿತಿನ್ ಗಡ್ಕರಿ ಅವರು ಮಂಡಿ ಸಂಸದೀಯ ಕ್ಷೇತ್ರದ ಕರ್ಸೋಗ್ ಪ್ರದೇಶದಲ್ಲಿ ಸಮಾವೇಶ ನಡೆಸಿದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುಲುವಿನ ಧಾಲ್ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅಲ್ಲದೇ ಬಿಜೆಪಿ ಅಭ್ಯರ್ಥಿ ಮತ್ತು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರೊಂದಿಗೆ ಹಮೀರ್ಪುರ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಿದರು. ಮತ್ತೊಂದೆಡೆ, ಹಿರಿಯ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಲನ್ನಲ್ಲಿ ರೋಡ್ಶೋ ನಡೆಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.