ನವದೆಹಲಿ: ಇಂದು ದೇಶದಾದ್ಯಂತ 57 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಇದು ಏಳನೇ ಮತ್ತು ಅಂತಿಮ ಹಂತದ ಮತದಾನವಾಗಿದ್ದು ಇಲ್ಲಿಗೆ 18ನೇ ಲೋಕಸಭೆಗಾಗಿನ ಚುನಾವಣೆ ಸಮಾಪ್ತಿಯಾಗಲಿದೆ.
ಉತ್ತರ ಪ್ರದೇಶ ಮತ್ತು ಪಂಜಾಬ್ನಲ್ಲಿ ತಲಾ 13 ಸ್ಥಾನಗಳು, ಪಶ್ಚಿಮ ಬಂಗಾಳದಲ್ಲಿ ಒಂಬತ್ತು ಸ್ಥಾನಗಳು, ಬಿಹಾರದಲ್ಲಿ ಎಂಟು, ಒಡಿಶಾದಲ್ಲಿ 6, ಹಿಮಾಚಲ ಪ್ರದೇಶದಲ್ಲಿ ನಾಲ್ಕು, ಜಾರ್ಖಂಡ್ನಲ್ಲಿ ಮೂರು ಮತ್ತು ಚಂಡೀಗಢದಲ್ಲಿ ಒಂದು ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದೆ.
10 ಕೋಟಿ 60 ಲಕ್ಷ ಮತದಾರರು ಈ ಹಂತದಲ್ಲಿ ಮತದಾನ ಮಾಡಿ 904 ಸ್ಪರ್ಧಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.
ಒಡಿಶಾದ 42 ವಿಧಾನಸಭಾ ಕ್ಷೇತ್ರಗಳಿಗೂ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6ರವರೆಗೆ ನಡೆಯಲಿದೆ.
ಸುಗಮ ಮತ್ತು ಪಾರದರ್ಶಕ ಮತದಾನವನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗವು ವಿಸ್ತಾರವಾದ ವ್ಯವಸ್ಥೆಗಳನ್ನು ಮಾಡಿದೆ. ಸುಡುವ ತಾಪಮಾನದಿಂದ ಎದುರಾಗುವ ಸವಾಲುಗಳನ್ನು ತಗ್ಗಿಸಲು, ಮತದಾರರ ಆರೋಗ್ಯ ಮತ್ತು ಯೋಗಕ್ಷೇಮವನ್ನು ಕಾಪಾಡಲು ಮತ್ತು ಚುನಾವಣಾಧಿಕಾರಿಗಳಿಗೆ ಕ್ರಮಗಳನ್ನು ಜಾರಿಗೆ ತರಲು ಚುನಾವಣಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಲೋಕಸಭೆ ಚುನಾವಣೆಯ ಅಂತಿಮ ಹಂತವು ಆಡಳಿತ ಮತ್ತು ವಿರೋಧ ಪಕ್ಷಗಳಿಗೆ ಹೆಚ್ಚಿನ ಮಹತ್ವವನ್ನು ಹೊಂದಿದೆ ಎಂದು ವಿಶ್ಲೇಷಿಸಲಾಗಿದೆ. ಜೂನ್ 4 ರಂದು ರಾಜಕೀಯ ನಾಯಕರ ಭವಿಷ್ಯವನ್ನು ನಿರ್ಧರಿಸುವ ಫಲಿತಾಂಶ ಹೊರಬೀಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.