ಬೆಂಗಳೂರು: ಕಾಂಗ್ರೆಸ್ ಪಕ್ಷವು ಸುಳ್ಳು ಆರೋಪ ಮಾಡಿ ಪತ್ರಿಕೆಗಳಲ್ಲಿ ಜಾಹೀರಾತು ನೀಡಿತ್ತು. ಜನರ ದಾರಿ ತಪ್ಪಿಸಿ ಅವರ ದೃಷ್ಟಿಕೋನ ಬದಲಾಗುವಂತೆ ಮಾಡಿತ್ತು. ಇದರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು ಎಂದು ವಿಧಾನಪರಿಷತ್ ಸದಸ್ಯ ಮತ್ತು ಬಿಜೆಪಿ ಮಾಜಿ ರಾಜ್ಯ ಕಾರ್ಯದರ್ಶಿ ಕೇಶವ್ ಪ್ರಸಾದ್ ಅವರು ತಿಳಿಸಿದರು.
ಬೆಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, 2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ, ಅದರ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯನವರು ಬಿಜೆಪಿ ರಾಜ್ಯ ಸರಕಾರದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ ಸುಳ್ಳು ಹೇಳಿ ಜನರ ದಾರಿ ತಪ್ಪಿಸುವ ಕೆಲಸ ಮಾಡಿದ್ದರು. ನಮ್ಮ ಸರಕಾರವು ಉತ್ತಮವಾಗಿ ಕೆಲಸ ಮಾಡಿದ್ದಲ್ಲದೆ ಜನಪರ ಕಾರ್ಯ ಮಾಡುತ್ತಿತ್ತು. ಗರಿಷ್ಠ ಪ್ರಮಾಣದಲ್ಲಿ ಎಫ್ಡಿಐಯನ್ನು ರಾಜ್ಯವು ಆಕರ್ಷಿಸಿತ್ತು ಎಂದು ವಿವರಿಸಿದರು.
ಸುಳ್ಳು ಆರೋಪ ಮಾಡಿದ ಇವರ ವಿರುದ್ಧ ಐಪಿಸಿ ಸೆಕ್ಷನ್ 500ರಂತೆ ಶಿಕ್ಷೆ ವಿಧಿಸಲು ಕೋರಿದ್ದೆವು. ಎರಡು ಹಿಯರಿಂಗ್ ಗೆ ಅವರು ಬಂದಿರಲಿಲ್ಲ. ಎರಡೂ ಸಂದರ್ಭದಲ್ಲಿ ಅವರು ಬೇರೆ ಬೇರೆ ನೆಪ ಒಡ್ಡಿ ಹಾಜರಾಗಿರಲಿಲ್ಲ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. ಇಂದಿನದು ಅಂತಿಮ ಅವಕಾಶ ಎಂದರು.
ಕರ್ನಾಟಕ ಸರಕಾರ ಕೊಟ್ಟ ಜಾಹೀರಾತನ್ನು ರಾಹುಲ್ ಗಾಂಧಿಯವರು ಟ್ವೀಟ್ ಮಾಡಿದ್ದರು. ಕರ್ನಾಟಕದ ಅಂದಿನ ಬಿಜೆಪಿ ಸರಕಾರ ದೊಡ್ಡ ಅಪರಾಧ ಮಾಡಿದೆ ಎಂದು ಈ ಟ್ವೀಟ್ ಮೂಲಕ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ರಾಹುಲ್ ಗಾಂಧಿಯವರು ಧ್ವನಿಗೂಡಿಸಿದ್ದರು. ಹಾಗಾಗಿ ಅವರು ಕೂಡ ಕೋರ್ಟಿಗೆ ಹಾಜರಾಗಬೇಕಿದೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.