ಗುವಾಹಟಿ: ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಘೋಷಣೆಯಾಗಿದೆ.
ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಸರಾಗವಾಗಿ ಜಯಭೇರಿ ಬಾರಿಸಿದೆ. ಹತ್ತು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ 60 ವಿಧಾನಸಭಾ ಕ್ಷೇತ್ರಗಳ ಪೈಕಿ 50 ಸ್ಥಾನಗಳಿಗೆ ಮತ ಎಣಿಕೆ ನಡೆದಿದೆ. ಬಿಜೆಪಿ 46 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ. ಅದರ ಮಿತ್ರಪಕ್ಷವಾದ ಕಾನ್ರಾಡ್ ಸಂಗ್ಮಾ ಅವರ ನ್ಯಾಷನಲ್ ಪೀಪಲ್ಸ್ ಪಾರ್ಟಿ ಐದು ಸ್ಥಾನಗಳನ್ನು ಗೆದ್ದಿದೆ.
ಅರುಣಾಚಲದಲ್ಲಿ ಬಿಜೆಪಿ ಗೆಲುವನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದಾರೆ. “ಧನ್ಯವಾದಗಳು ಅರುಣಾಚಲ ಪ್ರದೇಶ! ಈ ಅದ್ಭುತ ರಾಜ್ಯದ ಜನರು ಅಭಿವೃದ್ಧಿಯ ರಾಜಕೀಯಕ್ಕೆ ನಿಸ್ಸಂದಿಗ್ಧವಾದ ಜನಾದೇಶವನ್ನು ನೀಡಿದ್ದಾರೆ. ಬಿಜೆಪಿಗೆ ಮತ್ತೊಮ್ಮೆ ತಮ್ಮ ನಂಬಿಕೆಯನ್ನು ಪುನರುಜ್ಜೀವನಗೊಳಿಸಿದ್ದಕ್ಕಾಗಿ ಅವರಿಗೆ ನನ್ನ ಕೃತಜ್ಞತೆಗಳು. ನಮ್ಮ ಪಕ್ಷವು ರಾಜ್ಯದ ಬೆಳವಣಿಗೆಗೆ ಇನ್ನೂ ಹೆಚ್ಚಿನ ಶಕ್ತಿಯೊಂದಿಗೆ ಕೆಲಸ ಮಾಡುತ್ತದೆ” ಎಂದು ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲದೇ ಬಿಜೆಪಿ ಕಾರ್ಯಕರ್ತರ ಶ್ರಮವನ್ನು ಶ್ಲಾಘಿಸಿದ್ದಾರೆ.
ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಅವರು, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಬೃಹತ್ ಗೆಲುವು ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಗಡಿ ರಾಜ್ಯದ ಜನರು ಹೊಂದಿರುವ ಬೆಂಬಲವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.
ಅರುಣಾಚಲ ಮತ್ತು ಸಿಕ್ಕಿಂ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ.
ಸಿಕ್ಕಿಂನಲ್ಲಿ, ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಮತ್ತೆ ಅಧಿಕಾರಕ್ಕೆ ಬಂದಿದೆ. 32ರಲ್ಲಿ 31 ಸ್ಥಾನಗಳನ್ನು ಗೆದ್ದಿದೆ. ಪ್ರತಿಪಕ್ಷ ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್ ಕೇವಲ ಒಂದು ಸ್ಥಾನವನ್ನು ಗೆದ್ದಿದೆ. ಹಾಲಿ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಮಾಧ್ಯಮಗಳಿಗೆ, “ನಾನು ಸಿಕ್ಕಿಂ ಜನರಿಗೆ ಮತ್ತು ನಮ್ಮ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ಹೇಳುತ್ತೇನೆ. ನಾವು ನಮ್ಮ ಹೃದಯದಿಂದ ಜನರಿಗಾಗಿ ಕೆಲಸ ಮಾಡಿದ್ದೇವೆ. ಅದಕ್ಕಾಗಿಯೇ ನಾವು ಗೆದ್ದಿದ್ದೇವೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.