ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, ನೂತನ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ತಮ್ಮ ಸಚಿವ ಸಂಪುಟದೊಂದಿಗೆ ರಾಜೀನಾಮೆ ಸಲ್ಲಿಸಿದರು. 17ನೇ ಲೋಕಸಭೆಯನ್ನು ವಿಸರ್ಜನೆ ಮಾಡುವಂತೆಯೂ ಅವರು ಶಿಫಾರಸು ಮಾಡಿದ್ದಾರೆ.
ರಾಷ್ಟ್ರಪತಿಗಳು ರಾಜೀನಾಮೆಯನ್ನು ಅಂಗೀಕರಿಸಿದರು ಮತ್ತು ಹೊಸ ಸರ್ಕಾರ ಅಧಿಕಾರ ಸ್ವೀಕರಿಸುವವರೆಗೆ ಮುಂದುವರಿಯುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮಂತ್ರಿ ಮಂಡಳಿಗೆ ಮನವಿ ಮಾಡಿದರು.
ನವದೆಹಲಿಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯ ಬಳಿಕ ಈ ಬೆಳವಣಿಗೆ ನಡೆದಿದೆ. ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯು ಜೂನ್ 16 ರಂದು ಅಂತ್ಯಗೊಳ್ಳುವ ಸಚಿವ ಸಂಪುಟವನ್ನು ವಿಸರ್ಜಿಸಲು ಶಿಫಾರಸು ಮಾಡಿದೆ.
ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಜನತಾ ದಳ-ಯುನೈಟೆಡ್ (ಜೆಡಿಯು) ಮೋದಿ ಪರಮಾಣವಚನಕ್ಕೆ ಒಪ್ಪಿಕೊಂಡಿವೆ ಎನ್ನಲಾಗಿದೆ.
ಇಂದು ಮೈತ್ರಿಕೂಟದ ಸಭೆಯಲ್ಲಿ ಟಿಡಿಪಿ ಮತ್ತು ಜೆಡಿಯು ಬಿಜೆಪಿಗೆ ಔಪಚಾರಿಕ ಬೆಂಬಲ ಪತ್ರಗಳನ್ನು ಸಲ್ಲಿಸುವ ನಿರೀಕ್ಷೆಯಿದೆ.
ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಎನ್ಡಿಎಯ ಹೊಸದಾಗಿ ಆಯ್ಕೆಯಾದ ಸಂಸದರ ಸಭೆ ಜೂನ್ 7 ರಂದು ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಎನ್ಡಿಎ ಸರ್ಕಾರ ರಚನೆ ಕುರಿತು ಚರ್ಚೆ ನಡೆಯಲಿದೆ ಎಂದು ವರದಿ ತಿಳಿಸಿದೆ.
ಭಾರತದ ಚುನಾವಣಾ ಆಯೋಗವು 543 ಲೋಕಸಭಾ ಕ್ಷೇತ್ರಗಳ ಪೈಕಿ 542 ಕ್ಷೇತ್ರಗಳಿಗೆ ಫಲಿತಾಂಶವನ್ನು ಪ್ರಕಟಿಸಿದ್ದು, ಬಿಜೆಪಿ 240 ಮತ್ತು ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದಿದೆ.
Prime Minister Narendra Modi called on President Droupadi Murmu at Rashtrapati Bhavan. The Prime Minister tendered his resignation along with the Union Council of Ministers. The President accepted the resignation and requested the Prime Minister and the Union Council of Ministers… pic.twitter.com/SHIj1UMWpY
— ANI (@ANI) June 5, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.