ನವದೆಹಲಿ: ಇದೇ ಶನಿವಾರ ಪ್ರಧಾನಿ ನರೇಂದ್ರ ಮೋದಿಯವರು ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಮತ್ತು ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಈಗಾಗಲೇ ಮೋದಿಗೆ ತಮ್ಮ ಬೆಂಬಲವನ್ನು ಖಚಿಪಡಿಸಿವೆ.
ಇಂದು ದೆಹಲಿಯಲ್ಲಿ ನಡೆದ ಸಭೆಯಲ್ಲಿ ಎನ್ಡಿಎ ಮೈತ್ರಿಕೂಟದ ಎಲ್ಲಾ ಪಕ್ಷಗಳು ಸರ್ಕಾರ ರಚನೆಗೆ ಗ್ರೀನ್ ಸಿಗ್ನಲ್ ನೀಡಿವೆ.
ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಒಂದು ದಿನದ ನಂತರ ಅಂದರೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಚಿವರ ಮಂಡಳಿಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಸಲ್ಲಿಸಿದರು ಮತ್ತು 17 ನೇ ಲೋಕಸಭೆಯನ್ನು ವಿಸರ್ಜನೆ ಮಾಡಲು ಶಿಫಾರಸು ಮಾಡಿದರು.
ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ಡಿಎ 292 ಸ್ಥಾನಗಳನ್ನು ಗೆದ್ದಿದ್ದರೆ, ಕಾಂಗ್ರೆಸ್ ನೇತೃತ್ವದ ಇಂಡಿ ಬ್ಲಾಕ್ 234 ಸ್ಥಾನಗಳನ್ನು ಗಳಿಸಿದೆ. ಬಿಜೆಪಿ 240 ಸ್ಥಾನಗಳನ್ನು ಗಳಿಸಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಮತ್ತು ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದುಕೊಂಡಿದೆ, 2019 ಕ್ಕೆ ಹೋಲಿಸಿದರೆ ಅದರ ಸಂಖ್ಯೆಯನ್ನು ಗಮನಾರ್ಹವಾಗಿ ಸುಧಾರಿಸಿದೆ.
ರಾಷ್ಟ್ರಪತಿಗಳು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಮತ್ತು ಹೊಸ ಸರ್ಕಾರ ಅಧಿಕಾರ ವಹಿಸಿಕೊಳ್ಳುವವರೆಗೆ ಮುಂದುವರಿಯುವಂತೆ ಪ್ರಧಾನಿ ಮೋದಿ ಮತ್ತು ಮಂತ್ರಿ ಮಂಡಳಿಗೆ ವಿನಂತಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.