ನವದೆಹಲಿ: ಬುಧವಾರ ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನಿರ್ಗಮಿಸುತ್ತಿರುವ ಸಚಿವ ಸಂಪುಟಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿದ್ದರು.
ದೆಹಲಿಯಲ್ಲಿ ನಡೆದ ಔತಣಕೂಟದಲ್ಲಿ ಪ್ರಧಾನಿ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧಂಖರ್, ಅವರ ಪತ್ನಿ ಸುದೇಶ್ ಧಂಖರ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಉಪಸ್ಥಿತರಿದ್ದರು. ಅಲ್ಲದೇ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಪ್ರವಾಸೋದ್ಯಮ ಸಚಿವ ಜಿ ಕಿಶನ್ ರೆಡ್ಡಿ, ಮತ್ತು ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಸೇರಿದಂತೆ ಕೇಂದ್ರ ಸಚಿವರು ಔತಣಕೂಟದಲ್ಲಿ ಪಾಲ್ಗೊಂಡಿದ್ದರು.
ರಾಷ್ಟ್ರಪತಿ ಭವನದ ಎಕ್ಸ್ ಪೋಸ್ಟ್ನಲ್ಲಿ ಸಮಾರಂಭದ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ. “ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ನೇತೃತ್ವದ ಹೊರಹೋಗುವ ಕೇಂದ್ರ ಮಂತ್ರಿ ಮಂಡಳಿಗೆ ಔತಣಕೂಟವನ್ನು ಆಯೋಜಿಸಿದರು” ಎಂದು ಒಕ್ಕಣೆ ಬರೆಯಲಾಗಿದೆ.
President Droupadi Murmu hosted a dinner for the outgoing Union Council of Ministers, led by Prime Minister @narendramodi, at Rashtrapati Bhavan. pic.twitter.com/iCN4LYKpUi
— President of India (@rashtrapatibhvn) June 5, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.