ನವದೆಹಲಿ: ವಾರಾಂತ್ಯದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಶ್ರೀಲಂಕಾ, ಬಾಂಗ್ಲಾದೇಶ ಸೇರಿದಂತೆ ಹಲವಾರು ನೆರೆಯ ರಾಷ್ಟ್ರಗಳ ನಾಯಕರನ್ನು ಭಾರತ ಆಹ್ವಾನಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) 293 ಸ್ಥಾನಗಳನ್ನು ಗೆಲ್ಲುವ ಮೂಲಕ ಐತಿಹಾಸಿಕ ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳಲು ಪಿಎಂ ಮೋದಿ ಸಜ್ಜಾಗಿದ್ದಾರೆ.
ಬಾಂಗ್ಲಾದೇಶ, ಶ್ರೀಲಂಕಾ, ಭೂತಾನ್, ನೇಪಾಳ ಮತ್ತು ಮಾರಿಷಸ್ನ ಉನ್ನತ ನಾಯಕರು ಪ್ರಧಾನಿ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಲ್ಪಡುವ ವಿದೇಶಿ ನಾಯಕರಲ್ಲಿ ಸೇರಿದ್ದಾರೆ.
ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರ ಕಚೇರಿಯ ಮಾಧ್ಯಮ ವಿಭಾಗವು ಪ್ರಧಾನಿ ಮೋದಿ ಅವರ ಪ್ರಮಾಣ ವಚನ ಸಮಾರಂಭಕ್ಕೆ ಆಹ್ವಾನಿಸಲಾಗಿದೆ ಎಂದು ಹೇಳಿದೆ. ವಿಕ್ರಮಸಿಂಘೆ ಅವರು ಆಹ್ವಾನವನ್ನು ಸ್ವೀಕರಿಸಿದ್ದಾರೆ ಎಂದಿದೆ.
ಚುನಾವಣಾ ವಿಜಯಕ್ಕಾಗಿ ವಿಕ್ರಮಸಿಂಘೆ ಅವರು ದೂರವಾಣಿ ಕರೆಯಲ್ಲಿ ಪ್ರಧಾನಿ ಮೋದಿಯನ್ನು ಅಭಿನಂದಿಸಿದರು.
ಮೋದಿ ಮೊದಲ ಬಾರಿಗೆ ಪ್ರಮಾಣವಚನ ಸ್ವೀಕರಿಸಿದಾಗ ಸಾರ್ಕ್ (ದಕ್ಷಿಣ ಏಷ್ಯಾ ಪ್ರಾದೇಶಿಕ ಸಹಕಾರ ಸಂಘ) ದೇಶಗಳ ನಾಯಕರು ಭಾಗವಹಿಸಿದ್ದರು.
2019 ರಲ್ಲಿ ಪಿಎಂ ಮೋದಿ ಅವರು ಸತತ ಎರಡನೇ ಅವಧಿಗೆ ಪ್ರಧಾನಿಯಾದಾಗ ಅವರ ಪ್ರಮಾಣವಚನ ಸಮಾರಂಭದಲ್ಲಿ ಬಿಮ್ಸ್ಟೆಕ್ ರಾಷ್ಟ್ರಗಳ ನಾಯಕರು ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.