ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಮುಸ್ಲಿಂ ಮಹಿಳೆಯರು ಕಾಂಗ್ರೆಸ್ ಕಛೇರಿಯ ಮುಂದೆ ‘ಗ್ಯಾರಂಟಿ ಕಾರ್ಡ್’ ಹಿಡಿದು ಫಲಿತಾಂಶ ಬಂದಾಗಿನಿಂದ ಕ್ಯೂ ನಿಂತಿದ್ದಾರೆ. ಚುನಾವಣಾ ಪ್ರಚಾರದ ಸಮಯದಲ್ಲಿ ಕಾಂಗ್ರೆಸ್ ಜನರಿಗೆ 1 ಲಕ್ಷ ರೂಪಾಯಿ ಮತ್ತು ಜನರಿಗೆ ಉದ್ಯೋಗ ನೀಡುವ ಭರವಸೆಯನ್ನು ನೀಡಿತ್ತು. ಇದಕ್ಕೆ ಸಂಬಂಧಿಸಿದಂತೆ ಗ್ಯಾರಂಟಿ ಪತ್ರವನ್ನೂ ನೀಡಿತ್ತು.
ಮಹಿಳೆಯರು ಕಾಂಗ್ರೆಸ್ ಕಚೇರಿಯ ಹೊರಗೆ ಫಾರ್ಮ್ಗಳೊಂದಿಗೆ ಕಾಯುತ್ತಿರುವುದು ಸಮಾನ್ಯವಾಗಿ ಕಂಡು ಬರುತ್ತಿದೆ. ತಮ್ಮ ಫಾರ್ಮ್ಗಳನ್ನು ಪಡೆದು ಹಣ ನೀಡಲಿ ಎಂದು ಮಹಿಳೆಯರು ದಂಬಾಲು ಬೀಳುತ್ತಿದ್ದಾರೆ.
ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿ ಬ್ಲಾಕ್ ಯುಪಿಯಲ್ಲಿ ಒಟ್ಟು 43 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿಯನ್ನು ಹಿಂದಿಕ್ಕಿದ ಒಂದು ದಿನದ ನಂತರ ಮಹಿಳೆಯರು ಕಾಂಗ್ರೆಸ್ ಕಚೇರಿಯ ಮುಂದೆ ಜಮಾಯಿಸಿದ್ದಾರೆ. ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಹಲವು ಭರವಸೆಗಳನ್ನು ನೀಡಿತ್ತು ಮತ್ತು ಅವುಗಳಲ್ಲಿ ಮಹಿಳೆಯರಿಗೆ 1 ಲಕ್ಷ ರೂಪಾಯಿ ನೀಡುವುದೂ ಸೇರಿದೆ.
ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ನಲ್ಲಿ ಮನೆಯ ಒಬ್ಬ ಮಹಿಳೆಗೆ 1 ಲಕ್ಷ ರೂಪಾಯಿಗಳ ಭರವಸೆ ನೀಡಿದೆ ಎಂದು ಮಹಿಳೆಯರು ಹೇಳಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.