ನವದೆಹಲಿ: ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ)ದ ಪ್ರಮುಖ ಸದಸ್ಯರು ಇಂದು ಸಭೆ ಸೇರಿ, ಸತತ ಮೂರನೇ ಅವಧಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಧಾನಿಯಾಗಿ ಸರ್ವಾನುಮತದಿಂದ ಅನುಮೋದಿಸಿದರು. ಈ ವೇಳೆ ಮೋದಿ ಸಂಸದೀಯ ನಾಯಕನಾಗುವ ನಿರ್ಣಯವನ್ನು ಅಂಗೀಕರಿಸಿದರು.
ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಮತ್ತು ಜೆಡಿಯುನ ನಿತೀಶ್ ಕುಮಾರ್ ಅವರು ಮೋದಿ ಅವರನ್ನು ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುವ ಪ್ರಸ್ತಾಪವನ್ನು ಒಪ್ಪಿಕೊಂಡರು.
ಬಳಿಕ ಮಾತನಾಡಿದ ನಾಯ್ಡು, “ಇಂದು ಭಾರತವು ಸರಿಯಾದ ಸಮಯದಲ್ಲಿ ಸರಿಯಾದ ನಾಯಕನನ್ನು ಹೊಂದುತ್ತಿದೆ. ಅವರ ನಾಯಕತ್ವದಲ್ಲಿ ಭಾರತವು ಮುಂದಿನ 5 ವರ್ಷಗಳಲ್ಲಿ 1 ಅಥವಾ 2 ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ” ಎಂದು ಹೇಳಿದರು.
ನಿತೀಶ್ ಕುಮಾರ್ ಅವರು ತಮ್ಮ ಭಾಷಣದಲ್ಲಿ ವಿರೋಧ ಪಕ್ಷದ ಇಂಡಿ ಮೈತ್ರಿಯನ್ನು ಟೀಕಿಸಿದರು ಮತ್ತು ತಮ್ಮ ಪಕ್ಷವು ಯಾವಾಗಲೂ ಪ್ರಧಾನಿ ಮೋದಿಯವರೊಂದಿಗೆ ಇರುತ್ತದೆ ಎಂದು ಹೇಳಿದರು.
“ವಿರೋಧ ಬಣವು ದೇಶಕ್ಕಾಗಿ ಯಾವುದೇ ಕೆಲಸ ಮಾಡಿಲ್ಲ, ನಾನು ಯಾವಾಗಲೂ ಪ್ರಧಾನಿ ಮೋದಿಯವರೊಂದಿಗೆ ಇರುತ್ತೇನೆ, ಬಿಹಾರದ ಎಲ್ಲಾ ಬಾಕಿ ಉಳಿದಿರುವ ಕೆಲಸಗಳನ್ನು ಪೂರ್ಣ ಮಾಡಲಾಗುವುದು. ನಾವೆಲ್ಲರೂ ಒಗ್ಗೂಡಿರುವುದು ತುಂಬಾ ಒಳ್ಳೆಯದು ಮತ್ತು ನಾವೆಲ್ಲರೂ ಮೊದಿ ಜೊತೆ ಒಟ್ಟಾಗಿ ಕೆಲಸ ಮಾಡುತ್ತೇವೆ” ಎಂದು ನಿತೀಶ್ ಕುಮಾರ್ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.