ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಅಸೆಂಬ್ಲಿ ಚುನಾವಣೆ ನಡೆಸುವ ಪ್ರಕ್ರಿಯೆಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಅಧಿಕೃತವಾಗಿ ಪ್ರಾರಂಭಿಸಿದೆ.
“ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದ ಶಾಸಕಾಂಗ ಸಭೆಗೆ, ಸಾರ್ವತ್ರಿಕ ಚುನಾವಣೆಗೆ 1968 ರ ಚುನಾವಣಾ ಚಿಹ್ನೆಗಳ ಪ್ಯಾರಾ 10 ಬಿ (ಮೀಸಲಾತಿ ಮತ್ತು ಹಂಚಿಕೆ) ಆದೇಶದ ಅಡಿಯಲ್ಲಿ ಸಾಮಾನ್ಯ ಚಿಹ್ನೆಯನ್ನು ಹಂಚಲು ಅರ್ಜಿಗಳನ್ನು ಸ್ವೀಕರಿಸಲು ಆಯೋಗವು ನಿರ್ಧರಿಸಿದೆ” ಎಂದು ಮಾಧ್ಯಮ ಪ್ರಕಟನೆ ಮೂಲಕ ಭಾರತದ ಚುನಾವಣಾ ಆಯೋಗದ ಕಾರ್ಯದರ್ಶಿ ಜಯದೇಬ್ ಲಾಹಿರಿ ಹೇಳಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ (CEC) ರಾಜೀವ್ ಕುಮಾರ್ ಅವರ ಹೇಳಿಕೆಯನ್ನು ಅನುಸರಿಸಿ ಈ ಪ್ರಕಟನೆ ಹೊರಡಿಸಲಾಗಿದ್ದು, ಇದರಲ್ಲಿ ಜಮ್ಮು ಮತ್ತು ಕಾಶ್ಮೀರ ಜನರು ಶೀಘ್ರದಲ್ಲೇ ಕೇಂದ್ರಾಡಳಿತ ಪ್ರದೇಶದಲ್ಲಿ ತಮ್ಮ ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರವನ್ನು ಹೊಂದಿರುತ್ತಾರೆ ಎಂದು ಹೇಳಲಾಗಿದೆ.
2014 ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಕೊನೆಯ ಅಸೆಂಬ್ಲಿ ಚುನಾವಣೆ ನಡೆಯಿತು. ನಂತರ ಮುಫ್ತಿ ಮೊಹಮ್ಮದ್ ಸಯೀದ್ ನೇತೃತ್ವದ ಬಿಜೆಪಿ ಮತ್ತು ಪಿಡಿಪಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಿತು. 2016 ರಲ್ಲಿ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರ ಮರಣದ ನಂತರ, ಒಕ್ಕೂಟದ ನೇತೃತ್ವವನ್ನು ಅವರ ಪುತ್ರಿ ಮೆಹಬೂಬಾ ಮುಫ್ತಿ ವಹಿಸಿದ್ದರು. ಬಳಿಕ ಅಲ್ಲಿ ಸರ್ಕಾರ ಪತನಗೊಂಡು ಗವರ್ನರ್ ಆಡಳಿತ ಬಂದಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.