ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಆಯೋಜಿಸಲಾದ ಅದ್ಧೂರಿ ಸಮಾರಂಭದಲ್ಲಿ ದೇಶ ವಿದೇಶಗಳ ಹಲವು ಗಣ್ಯರ ಸಮ್ಮುಖದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾ ವಿಧಿ ಬೋಧಿಸಿದರು.
ಮೋದಿ ಜೊತೆ 72 ಸಚಿವರು ಕೂಡ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಅವರಲ್ಲಿ 30 ಕ್ಯಾಬಿನೆಟ್ ಮಂತ್ರಿಗಳು, ಐದು ಸ್ವತಂತ್ರ ಉಸ್ತುವಾರಿ ಮತ್ತು 36 ರಾಜ್ಯ ಸಚಿವರು. ಅವರಿಗೆ ಖಾತೆಗಳನ್ನು ನಂತರದಲ್ಲಿ ಹಂಚಿಕೆ ಮಾಡಲಾಗುತ್ತದೆ.
73ರ ಹರೆಯದ ಪ್ರಧಾನಿ ಮೋದಿ ಅವರು 2014 ರಲ್ಲಿ ಪ್ರಧಾನಿಯಾದ ನಂತರ ಮೂರನೇ ಅವಧಿಗೆ ಪ್ರಧಾನಿಯಾಗುತ್ತಿದ್ದಾರೆ. ಈ ಬಾರಿ ಅವರು ಸಮ್ಮಿಶ್ರ ಸರ್ಕಾರದ ನೇತೃತ್ವ ವಹಿಸಲಿದ್ದಾರೆ. ಹಿಂದಿನ ಎರಡು ಅವಧಿಯಲ್ಲಿ ಬಿಜೆಪಿ ಪೂರ್ಣ ಬಹುಮತವನ್ನು ಹೊಂದಿತ್ತು.
ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಧಾನಿ ಮೋದಿಗೆ ಪ್ರಮಾಣ ವಚನ ಬೋಧಿಸಿದರು. ಪ್ರಧಾನಿ ಬಳಿಕ ರಾಜನಾಥ್ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.
#WATCH | BJP leader Dr S Jaishankar takes oath as a Union Cabinet Minister in the Prime Minister Narendra Modi-led NDA government pic.twitter.com/Bp5aN1Ad0f
— ANI (@ANI) June 9, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.