ಶ್ರೀನಗರ: ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಭಾನುವಾರ ಸಂಜೆ ಉಗ್ರರ ದಾಳಿ ನಡೆದಿದೆ. ಶಿವಖೋಡಿಯಿಂದ ಕತ್ರಾಗೆ ತೆರಳುತ್ತಿದ್ದ ಬಸ್ ಮೇಲೆ ಉಗ್ರರು ಸುಮಾರು 30ರಿಂದ 40 ಸುತ್ತು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಕನಿಷ್ಠ 10 ಮಂದಿ ಹತ್ಯೆಯಾಗಿದ್ದಾರೆ ಮತ್ತು 33 ಮಂದಿಗೆ ಗಾಯಗಳಾಗಿವೆ.
ಭಯೋತ್ಪಾದಕರ ಗುಂಡೇಟಿಗೆ ಬಸ್ ಚಾಲಕ ಗಾಯಗೊಂಡ ಪರಿಣಾಮ ಬಸ್ ನಿಯಂತ್ರಣ ಕಳೆದುಕೊಂಡು ಆಳವಾದ ಕಂದಕಕ್ಕೆ ಬಿದ್ದಿದೆ. ಬಸ್ ಕಂದಕಕ್ಕೆ ಬಿದ್ದ ಪರಿಣಾಮ 10 ಮಂದಿ ಯಾತ್ರಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದು, 33 ಮಂದಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ನಾರಾಯಣ ಆಸ್ಪತ್ರೆ ಮತ್ತು ರಿಯಾಸಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ದಾಳಿಯ ಬಳಿಕ ಭಾರತೀಯ ಸೇನೆಯು ರಿಯಾಸಿಯಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಅರಣ್ಯ ಪ್ರದೇಶದಲ್ಲಿ ಶೋಧ ನಡೆಸಲು ಡ್ರೋನ್ಗಳನ್ನು ಬಳಸಲಾಗುತ್ತಿದೆ. ಉಗ್ರರು ಪಾಕಿಸ್ತಾನ ಮೂಲದವರು ಎನ್ನುವ ಮಾಹಿತಿ ಇದೆ ಎನ್ನಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ ಕೂಡ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯ ನಡೆಸುತ್ತಿದೆ.
ಈ ದಾಳಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಖಂಡಿಸಿದ್ದು, ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ಸಿನ ಮೇಲೆ ನಡೆದ ಭಯೋತ್ಪಾದಕರ ದಾಳಿಯಿಂದ ನಾನು ದುಃಖಿತನಾಗಿದ್ದೇನೆ. ಈ ಕ್ರೂರ ಕೃತ್ಯವು ಮಾನವೀಯತೆಯ ವಿರುದ್ಧದ ಅಪರಾಧವಾಗಿದೆ ಮತ್ತು ಇದನ್ನು ಪ್ರಬಲ ಪದಗಳಲ್ಲಿ ಖಂಡಿಸಬೇಕು. ಸಂತ್ರಸ್ತರ ಕುಟುಂಬಗಳೊಂದಿಗೆ ರಾಷ್ಟ್ರ ನಿಂತಿದೆ ಎಂದಿದ್ದಾರೆ,
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.