ನವದೆಹಲಿ: ಸಚಿವ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಅವಕಾಶ ನೀಡಿದ್ದು, ಅದರ ಶ್ರೇಯಸ್ಸು ಕನ್ನಡ ನಾಡು ನುಡಿಯ ಜನತೆಗೆ ಸಲ್ಲುತ್ತದೆ ಎಂದು ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ ಭಾನುವಾರ ಹೇಳಿದ್ದಾರೆ.
ಯಾವುದೇ ಖಾತೆಗೆ ಬೇಡಿಕೆ ಇಟ್ಟಿಲ್ಲ ಎಂದಿರುವ ಮಾಜಿ ಮುಖ್ಯಮಂತ್ರಿ, ಕೃಷಿ ಸಚಿವರಾಗುವ ಆಸೆಯನ್ನು ಪುನರುಚ್ಚರಿಸಿದರು.
ನವದೆಹಲಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಸಿಕ್ಕ ಅವಕಾಶವನ್ನು ಬಳಸಿಕೊಂಡು ದೇಶದ ಮತ್ತು ರಾಜ್ಯದ ಜನತೆಗೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವುದು ನನ್ನ ಉದ್ದೇಶವಾಗಿದೆ. ನರೇಂದ್ರ ಮೋದಿಯವರ ದೃಷ್ಟಿಕೋನವನ್ನು ಕಾರ್ಯಗತಗೊಳಿಸಲು ನಾನು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಮತ್ತು ಆ ಮೂಲಕ ಅವರಿಗೆ ಮತ್ತು ನಮ್ಮ ರಾಜ್ಯಕ್ಕೆ ಒಳ್ಳೆಯ ಹೆಸರನ್ನು ತರಲು ಬಯಸುತ್ತೇನೆ. ಇದು ನನ್ನ ಸಂಕಲ್ಪ ಎಂದರು.
ಕುಮಾರಸ್ವಾಮಿ ಕೃಷಿ ಸಚಿವರಾಗುವ ತಮ್ಮ ಆಸೆಯನ್ನು ಚುನಾವಣೆಗೂ ಮುನ್ನ ಮತ್ತು ನಂತರ ಪದೇ ಪದೇ ವ್ಯಕ್ತಪಡಿಸುತ್ತಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರವನ್ನು ಗೆಲ್ಲುವ ಮೂಲಕ, ಮಾಜಿ ಸಿಎಂ ಜೆಡಿಎಸ್ ಕಳೆದುಕೊಂಡ ಭದ್ರಕೋಟೆಯನ್ನು ಮರಳಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ, ಮಾತ್ರವಲ್ಲದೇ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಕರ್ನಾಟಕದಲ್ಲಿ ಕಳೆದುಹೋದ ತಮ್ಮ ಪಕ್ಷದ ರಾಜಕೀಯ ಪ್ರಸ್ತುತತೆಯನ್ನು ಮರಳಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.