ನವದೆಹಲಿ: ಏಳು ರಾಜ್ಯಗಳ 13 ಸ್ಥಾನಗಳಿಗೆ ವಿಧಾನಸಭಾ ಉಪಚುನಾವಣೆ ನಡೆಸುವ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ ಇಂದು ಪ್ರಕಟಿಸಿದೆ. ಭಾರತೀಯ ಚುನಾವಣಾ ಆಯೋಗದ ಪ್ರಕಾರ, ಎಲ್ಲಾ ಏಳು ಸ್ಥಾನಗಳಿಗೆ ಜುಲೈ 10 ರಂದು ಉಪಚುನಾವಣೆ ನಡೆಯಲಿದೆ.
ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆ 2024 ರಲ್ಲಿ ಸ್ಪರ್ಧಿಸಲು ಹಲವು ಹಾಲಿ ಶಾಸಕರಿಗೆ ಟಿಕೆಟ್ ನೀಡಲಾದ ಪರಿಣಾಮ ಅನೇಕ ಸ್ಥಾನಗಳು ತೆರವಾಗಿರುವ ಹಿನ್ನೆಲೆಯಲ್ಲಿ ಈ ಉಪ ಚುನಾವಣೆ ನಡೆಯುತ್ತಿದೆ.
ಜೂನ್ 14 ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು, ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಜೂನ್ 21 ಮತ್ತು ನಾಮಪತ್ರಗಳ ಪರಿಶೀಲನೆ ಜೂನ್ 26 ರಂದು ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಜೂನ್ 26 ಕೊನೆಯ ದಿನವಾಗಿದೆ. ಮತದಾನ ಜುಲೈ 10 ರಂದು ನಡೆಯಲಿದ್ದು, ಜುಲೈ 13 ರಂದು ಮತ ಎಣಿಕೆ ನಡೆಯಲಿದೆ.
13 ಸ್ಥಾನಗಳು ಬಿಹಾರದ ರುಪೌಲಿ, ರಾಯ್ಗಂಜ್ ರಣಘಾಟ್ ದಕ್ಷಿಣ್, ಪಶ್ಚಿಮ ಬಂಗಾಳದ ಬಾಗ್ದಾ ಮತ್ತು ಮಾಣಿಕ್ತಾಲಾ, ತಮಿಳುನಾಡಿನ ವಿಕ್ರವಾಂಡಿ, ಮಧ್ಯಪ್ರದೇಶದ ಅಮರವಾರ, ಉತ್ತರಾಖಂಡದ ಬದರಿನಾಥ್ ಮತ್ತು ಮಂಗಳೌರ್, ಪಂಜಾಬ್ನ ಜಲಂಧರ್ ಪಶ್ಚಿಮ ಮತ್ತು ಹಿಮಾಚಲ ಪ್ರದೇಶದ ಡೆಹ್ರಾ, ಹಮೀರ್ಪುರ ಮತ್ತು ನಲಗಢ ಸೇರಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.