ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಕೇಂದ್ರ ರಾಜ್ಯ ಸಚಿವರಾಗಿ (MoS) ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ ನಟ-ರಾಜಕಾರಣಿ ಸುರೇಶ್ ಗೋಪಿ ಅವರು ಹೊಸ ಜವಾಬ್ದಾರಿಯಿಂದ ಮುಕ್ತರಾಗಲು ಬಯಸುತ್ತಿದ್ದಾರೆ ಎಂದು ಕೆಲ ಮಾಧಮಗಳು ವರದಿ ಮಾಡಿದ್ದು, ಈ ಬಗ್ಗೆ ಸ್ವತಃ ಗೋಪಿ ಅವೇ ಸ್ಪಷ್ಟನೆ ನೀಡಿದ್ದಾರೆ ಮತ್ತು ಮಾಧ್ಯಮ ವರದಿಗಳನ್ನು ನಿರಾಕರಿಸಿದ್ದಾರೆ.
ತ್ರಿಶೂರ್ ಲೋಕಸಭಾ ಕ್ಷೇತ್ರದಿಂದ ಗೆದ್ದಿರುವ ಸುರೇಶ್ ಗೋಪಿ ಅವರು ಸೋಮವಾರ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ ಪೋಸ್ಟ್ ಮಾಡಿದ್ದು, “ಕೆಲವು ಮಾಧ್ಯಮ ವೇದಿಕೆಗಳು ನಾನು ಮೋದಿ ಸರ್ಕಾರದ ಮಂತ್ರಿ ಮಂಡಳಿಗೆ ರಾಜೀನಾಮೆ ನೀಡಲಿದ್ದೇನೆ ಎಂದು ತಪ್ಪು ಸುದ್ದಿಯನ್ನು ಹರಡುತ್ತಿವೆ. ಇದು ತೀರಾ ಸುಳ್ಳು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಾವು ಕೇರಳದ ಅಭಿವೃದ್ಧಿ ಮತ್ತು ಸಮೃದ್ಧಿಗೆ ಬದ್ಧರಾಗಿದ್ದೇವೆ” ಎಂದಿದ್ದಾರೆ.
ಮಲಯಾಳಂ ಚಿತ್ರರಂಗದ ಪ್ರಮುಖ ನಟರಾದ ಸುರೇಶ್ ಗೋಪಿ ಅವರು ಲೋಕಸಭೆ ಚುನಾವಣೆಯಲ್ಲಿ ಕೇರಳದಿಂದ ಚುನಾಯಿತರಾದ ಮೊದಲ ಬಿಜೆಪಿ ಸಂಸದರಾಗುವ ಮೂಲಕ ಇತಿಹಾಸವನ್ನು ಬರೆದಿದ್ದಾರೆ. ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ಸುರೇಶ್ ಗೋಪಿ 74,686 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಅವರು MoS ಆಗಿ ಸೇರ್ಪಡೆಗೊಳ್ಳುವುದರ ಬಗ್ಗೆ ಅತೃಪ್ತಿ ಹೊಂದಿದ್ದಾರೆ ಮತ್ತು ಕ್ಯಾಬಿನೆಟ್ ಮಂತ್ರಿಯಾಗಿ ಅಥವಾ ಕನಿಷ್ಠ ರಾಜ್ಯ ಸಚಿವರಾಗಿ (ಸ್ವತಂತ್ರ ಉಸ್ತುವಾರಿ) ನೇಮಕಗೊಳ್ಳಲು ಆಶಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡುತ್ತಿರುವ ನಡುವೆ ಅವರ ಸ್ಪಷ್ಟನೆ ಬಂದಿದೆ.
https://x.com/TheSureshGopi/status/1800096601043800482?ref_src=twsrc%5Etfw%7Ctwcamp%5Etweetembed%7Ctwterm%5E1800096601043800482%7Ctwgr%5E00ed70919aec71e7f5161c0e3e16c3a82d7e4c89%7Ctwcon%5Es1_&ref_url=https%3A%2F%2Fwww.hindustantimes.com%2Findia-news%2Fkerala-suresh-gopi-wants-to-quit-narendra-modi-3-0-cabinet-actor-bjp-mp-reacts-101718013419176.html
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.