ನವದೆಹಲಿ: ಭಾರತದ ಪ್ರಧಾನಿಯಾಗಿ ಮೂರನೇ ಅವಧಿಗೆ ಅಧಿಕಾರವನ್ನು ವಹಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಒಮನ್ ಸುಲ್ತಾನ್ ದೂರವಾಣಿ ಕರೆ ಮಾಡಿ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಈ ಬಗ್ಗೆ ಪ್ರಧಾನಿ ಕಾರ್ಯಾಲಯವು ಮಾಹಿತಿಯನ್ನು ನೀಡಿದೆ.
“ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಓಮನ್ ಸುಲ್ತಾನ್ ಸುಲ್ತಾನ್ ಹೈತಮ್ ಬಿನ್ ತಾರಿಕ್ ಅವರಿಂದ ದೂರವಾಣಿ ಕರೆಯನ್ನು ಸ್ವೀಕರಿಸಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಸಾರ್ವತ್ರಿಕ ಚುನಾವಣೆಯ ನಂತರ ಮೂರನೇ ಅವಧಿಗೆ ಪ್ರಧಾನಿಯಾಗಿ ಮರು ನೇಮಕಗೊಂಡಿರುವ ಪ್ರಧಾನಿ ಮೋದಿಯವರಿಗೆ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ಉಭಯ ದೇಶಗಳ ಪರಸ್ಪರ ಪ್ರಯೋಜನಕ್ಕಾಗಿ ಭಾರತ-ಒಮನ್ ಪಾಲುದಾರಿಕೆಯನ್ನು ಇನ್ನಷ್ಟು ಆಳಗೊಳಿಸಲು ಮತ್ತು ಬಲಪಡಿಸಲು ಉಭಯ ನಾಯಕರು ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು. ಪ್ರಧಾನಮಂತ್ರಿಯವರು ಮುಂಬರುವ ಈದ್ ಅಲ್ ಅಧಾ ಹಬ್ಬಕ್ಕಾಗಿ ಸುಲ್ತಾನ್ ಮತ್ತು ಓಮನ್ ಜನರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ” ಎಂದು ಹೇಳಿಕೆ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ತಮ್ಮ ಮೂರನೇ ಅವಧಿಗಾಗಿ ದೇಶ-ವಿದೇಶಗಳಿಂದ ಭರಪೂರ ಶುಭಾಶಯಗಳನ್ನು ಪಡೆದುಕೊಂಡಿದ್ದಾರೆ.
Pleased to speak with my friend, the Amir of Qatar H.H. Sheikh Tamim Bin Hamad Al Thani. I thank him for his warm wishes and positive sentiments towards India. We reaffirmed our commitment to advance India-Qatar ties to unprecedented heights. @TamimBinHamad
— Narendra Modi (@narendramodi) June 11, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.