ಹೈದರಾಬಾದ್: ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಒಂದು ದಿನ ಮೊದಲು, ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಮಂಗಳವಾರ ಅಮರಾವತಿ ರಾಜ್ಯದ ಏಕೈಕ ರಾಜಧಾನಿಯಾಗಲಿದೆ ಎಂದು ಘೋಷಿಸಿದರು.
ಆಂಧ್ರಪ್ರದೇಶ ವಿಧಾನಸಭೆಯಲ್ಲಿ ಎನ್ಡಿಎ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾದ ಟಿಡಿಪಿ, ಬಿಜೆಪಿ ಮತ್ತು ಜನಸೇನಾ ಶಾಸಕರ ಜಂಟಿ ಸಭೆಯನ್ನು ಉದ್ದೇಶಿಸಿ ಚಂದ್ರಬಾಬು ನಾಯ್ಡು ಈ ಘೋಷಣೆ ಮಾಡಿದರು.
ನಮ್ಮ ಸರ್ಕಾರದಲ್ಲಿ ಮೂರು ರಾಜಧಾನಿಗಳ ನೆಪದಲ್ಲಿ ಆಟ ನಡೆಯುವುದಿಲ್ಲ, ನಮ್ಮ ರಾಜಧಾನಿ ಅಮರಾವತಿ. ಅಮರಾವತಿಯೇ ರಾಜಧಾನಿ ಎಂದು ಚಂದ್ರಬಾಬು ನಾಯ್ಡು ಪ್ರತಿಪಾದಿಸಿದರು. ಅಲ್ಲದೇ ವಿಶಾಖಪಟ್ಟಣ ನಮ್ಮ ವಾಣಿಜ್ಯ ರಾಜಧಾನಿ ಎಂದರು.
2014 ಮತ್ತು 2019 ರ ನಡುವೆ ವಿಭಜಿತ ಆಂಧ್ರಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿ, ಅವರು ರಾಜಧಾನಿಯಾಗಿ ಅಮರಾವತಿಯ ಕಲ್ಪನೆಯನ್ನು ಹೊರತಂದಿದ್ದರು. ಆದರೆ, ಚಂದ್ರಬಾಬು ನಾಯ್ಡು ಅವರ ಕನಸಿನ ಕೂಸು 2019 ರಲ್ಲಿ ಟಿಡಿಪಿ ಅಧಿಕಾರವನ್ನು ಕಳೆದುಕೊಂಡಾಗ ಹಿನ್ನಡೆ ಅನುಭವಿಸಿತು ಮತ್ತು ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ಸಿಪಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ಅಮರಾವತಿ ನೆನೆಗುದಿಗೆ ಬಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.