ನವದೆಹಲಿ: ಪಡಿತರ ಚೀಟಿದಾರರಿಗೆ ಅಗತ್ಯ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸರಕಾರವು ಆಧಾರ್ ಮತ್ತು ಪಡಿತರ ಚೀಟಿ ಜೋಡಣೆಯ ಗಡುವನ್ನು ಮತ್ತೊಮ್ಮೆ ವಿಸ್ತರಿಸಿದೆ. ಆಧಾರ್ ಮತ್ತು ರೇಷನ್ ಕಾರ್ಡ್ ಅನ್ನು ಲಿಂಕ್ ಮಾಡಲು ಹೊಸ ಗಡುವು 30 ಸೆಪ್ಟೆಂಬರ್ 2024 ಆಗಿದೆ. ಹಿಂದಿನ ಕೊನೆಯ ದಿನಾಂಕ ಜೂನ್ 30 ಆಗಿತ್ತು.
ಈ ಕುರಿತು ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಅಧಿಸೂಚನೆ ಹೊರಡಿಸಿದೆ.
30 ಸೆಪ್ಟೆಂಬರ್ 2024 ರೊಳಗೆ ಆಧಾರ್-ಪಡಿತರ ಕಾರ್ಡ್ ಲಿಂಕ್ ಅನ್ನು ಪೂರ್ಣಗೊಳಿಸಲು ಕೆಳಗೆ ತಿಳಿಸಲಾದ ದಾಖಲೆಗಳ ಅಗತ್ಯವಿದೆ
ಮೂಲ ಪಡಿತರ ಚೀಟಿಯ ನಕಲು ಪ್ರತಿ
ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಫೋಟೋಕಾಪಿ
ಕುಟುಂಬದ ಮುಖ್ಯಸ್ಥರ ಆಧಾರ್ ಕಾರ್ಡ್ ನಕಲು ಪ್ರತಿ
ಬ್ಯಾಂಕ್ ಪಾಸ್ಬುಕ್ನ ಫೋಟೋಕಾಪಿ
ಕುಟುಂಬದ ಮುಖ್ಯಸ್ಥನ ಎರಡು ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳು
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.