ಕುವೈತ್: ಇಂದು ಮುಂಜಾನೆ ಕುವೈತ್ನ ಮಂಗಾಫ್ನಲ್ಲಿ ಆರು ಅಂತಸ್ತಿನ ಕಟ್ಟಡದಲ್ಲಿ ಭೀಕರ ಬೆಂಕಿ ಕಾಣಿಸಿಕೊಂಡಿದ್ದು, ಇದರ ಪರಿಣಾಮವಾಗಿ 41 ಜನರು ಸಾವನ್ನಪ್ಪಿದ್ದಾರೆ. ಇವರಲ್ಲಿಅನೇಕರು ಭಾರತೀಯರು ಎಂದು ವರದಿಗಳು ತಿಳಿಸಿವೆ.
ಅಡುಗೆಮನೆಯಲ್ಲಿ ಪ್ರಾರಂಭವಾದ ಬೆಂಕಿಯು ಅದೇ ಕಂಪನಿಯ ಸುಮಾರು 160 ಕಾರ್ಮಿಕರು ವಾಸಿಸುವ ಕಟ್ಟಡದ ಮೇಲೆ ಹಬ್ಬಿದೆ. ಬಲಿಯಾದವರಲ್ಲಿ ಹಲವಾರು ಭಾರತೀಯರು ಸೇರಿದ್ದಾರೆ. ಸತ್ತವರಲ್ಲಿ ಹೆಚ್ಚಿನವರು 20 ರಿಂದ 50 ವರ್ಷ ವಯಸ್ಸಿನ ಭಾರತೀಯ ಪ್ರಜೆಗಳು ಎಂದು ಕುವೈತ್ ಮೇಜರ್ ಜನರಲ್ ಈದ್ ಅಲ್-ಒವೈಹಾನ್ ಹೇಳಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಸಲಾಗಿದೆ. ಅನೇಕರು ಆಸ್ಪತ್ರೆಯಲ್ಲಿಯೇ ಅಸುನೀಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಈ ವೇಳೆ ಐವರು ಅಗ್ನಿಶಾಮಕ ಸಿಬ್ಬಂದಿಯೂ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.
ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಘಟನೆ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ ಮತ್ತು ಭಾರತೀಯ ರಾಯಭಾರ ಕಚೇರಿಯಿಂದ ಸಂಪೂರ್ಣ ಬೆಂಬಲದ ಭರವಸೆ ನೀಡಿದ್ದಾರೆ. “ಕುವೈತ್ ನಗರದಲ್ಲಿ ಅಗ್ನಿ ಅವಘಡದ ಸುದ್ದಿಯಿಂದ ತೀವ್ರ ಆಘಾತವಾಗಿದೆ. 40 ಕ್ಕೂ ಹೆಚ್ಚು ಸಾವುಗಳು ಮತ್ತು 50 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಮ್ಮ ರಾಯಭಾರಿ ಸ್ಥಳಕ್ಕೆ ತೆರಳಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಾವು ಕಾಯುತ್ತಿದ್ದೇವೆ. ದುರಂತವಾಗಿ ಸಾವನ್ನಪ್ಪಿದವರ ಕುಟುಂಬಗಳಿಗೆ ಆಳವಾದ ಸಂತಾಪ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಎಲ್ಲರಿಗೂ ನಮ್ಮ ರಾಯಭಾರ ಕಚೇರಿ ಸಂಪೂರ್ಣ ನೆರವು ನೀಡುತ್ತದೆ” ಎಂದು ಜೈಶಂಕರ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.