ಭುವನೇಶ್ವರ: ಒಡಿಶಾದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ ಅವರು ಇಂದು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಪೂರ್ವ ಭಾರತದ ಸುಂದರ ರಾಜ್ಯದಲ್ಲಿ ಪಕ್ಷದ ಆಗಮನವನ್ನು ಪ್ರತಿಫಲಿಸುವ ಭವ್ಯ ಸಮಾರಂಭದಲ್ಲಿ ಕೆವಿ ಸಿಂಗ್ ಡಿಯೋ ಮತ್ತು ಪ್ರವತಿ ಪರಿದಾ ಅವರು ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಹಲವಾರು ಕೇಂದ್ರ ಸಚಿವರು ಮತ್ತು ಇತರ ಗಣ್ಯರು ಭಾಗವಹಿಸಿದ್ದಾರೆ.
24 ವರ್ಷಗಳ ಕಾಲ ರಾಜ್ಯವನ್ನು ಮುನ್ನಡೆಸಿದ ಬಿಜು ಜನತಾ ದಳದ ಮುಖ್ಯಸ್ಥ ನವೀನ್ ಪಟ್ನಾಯಕ್ ಅವರು ಕೂಡ ಕಾರ್ಯಕ್ರಮಕ್ಕೆ ಹಾಜರಾಗಿದ್ದಾರೆ. ಮಾಝಿ ಅವರು ನಿನ್ನೆ ಸಂಜೆ ಅವರ ನಿವಾಸಕ್ಕೆ ತೆರಳಿ ಅವರನ್ನು ಇಂದಿನ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು.
ಈ ಬಾರಿ ತನ್ನ ಜನಾದೇಶವನ್ನು ಬಿಡಿಶಾ ಬದಲಾಯಿಸಿದ್ದು, 147 ವಿಧಾನಸಭಾ ಸ್ಥಾನಗಳಲ್ಲಿ ಬಿಜೆಪಿಗೆ 78 ಸ್ಥಾನಗಳನ್ನು ನೀಡಿದೆ. ಬಿಜೆಡಿ 51 ಸ್ಥಾನಗಳನ್ನು ಗೆದ್ದಿದೆ.
ಕಿಯೋಂಜಾರ್ನಿಂದ ನಾಲ್ಕು ಬಾರಿ ಶಾಸಕರಾಗಿರುವ ಮತ್ತು ಪಕ್ಷದ ಬುಡಕಟ್ಟು ನಾಯಕನಾದ 52 ವರ್ಷದ ಮಾಝಿ ಒಬ್ಬ ಅನುಭವಿ ರಾಜಕಾರಣಿ ಮತ್ತು ಅವರ ಸಾರ್ವಜನಿಕ ಸೇವೆ ಮತ್ತು ಸಾಂಸ್ಥಿಕ ಕೌಶಲ್ಯಗಳು ಉನ್ನತ ಹುದ್ದೆಯ ರೇಸ್ನಲ್ಲಿ ಅವರ ಪರವಾಗಿ ಕೆಲಸ ಮಾಡಿದೆ ಎಂದು ಮೂಲಗಳು ಸೂಚಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.