ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಬುಧವಾರ ರಾತ್ರಿ ಕುವೈತ್ ಸಚಿವ ಅಬ್ದುಲ್ಲಾ ಅಲಿ ಅಲ್-ಯಾಹ್ಯಾ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ದಕ್ಷಿಣ ಕುವೈತ್ನ ಮಂಗಾಫ್ ಪ್ರದೇಶದಲ್ಲಿ ಸಂಭವಿಸಿದ ವಿನಾಶಕಾರಿ ಬೆಂಕಿಯಲ್ಲಿ ಸಾವನ್ನಪ್ಪಿದವರ ಪಾರ್ಥಿವ ಶರೀರವನ್ನು ಶೀಘ್ರವಾಗಿ ಸ್ವದೇಶಕ್ಕೆ ಹಿಂದಿರುಗಿಸುವಂತೆ ಒತ್ತಾಯಿಸಿದ್ದಾರೆ.
ಸುಮಾರು 195 ವಲಸೆ ಕಾರ್ಮಿಕರು ಇದ್ದ ಕಟ್ಟಡದಲ್ಲಿ ಸಂಭವಿಸಿದ ಬೆಂಕಿಯಲ್ಲಿ ಸುಮಾರು 40 ಭಾರತೀಯರು ಸಾವನ್ನಪ್ಪಿದ್ದಾರೆ ಮತ್ತು 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
“ಕುವೈತ್ನಲ್ಲಿ ಸಂಭವಿಸಿದ ಅಗ್ನಿ ದುರಂತದ ಕುರಿತು ಕುವೈತ್ ವಿದೇಶಾಂಗ ಸಚಿವ ಅಬ್ದುಲ್ಲಾ ಅಲಿ ಅಲ್-ಯಾಹ್ಯಾ ಅವರೊಂದಿಗೆ ಮಾತನಾಡಿದ್ದೇನೆ. ಆ ನಿಟ್ಟಿನಲ್ಲಿ ಕುವೈತ್ ಅಧಿಕಾರಿಗಳು ಮಾಡಿದ ಪ್ರಯತ್ನಗಳ ಬಗ್ಗೆ ಅವರು ನನಗಡ ತಿಳಿಸಿದರು. ಘಟನೆಯ ಸಂಪೂರ್ಣ ತನಿಖೆ ನಡೆಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ” ಎಂದು ಜೈಶಂಕರ್ ಎಕ್ಸ್ ಪೋಸ್ಟ್ ಮಾಡಿದ್ದಾರೆ.
ಇನ್ನೊಂದೆಡೆ ಪ್ರಧಾನಿ ನರೇಂದ್ರ ಮೋದಿಯವರ ನಿರ್ದೇಶನದ ಮೇರೆಗೆ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು ತುರ್ತಾಗಿ ಕುವೈತ್ಗೆ ಪ್ರಯಾಣಿಸಿದ್ದಾರೆ, ಬೆಂಕಿಯಲ್ಲಿ ಗಾಯಗೊಂಡ ಭಾರತೀಯರಿಗೆ ನೆರವನ್ನು ಮೇಲ್ವಿಚಾರಣೆ ಮಾಡಲು ಮತ್ತು ಸತ್ತವರ ಪಾರ್ಥಿವ ಶರೀರವನ್ನು ಶೀಘ್ರವಾಗಿ ಸ್ವದೇಶಕ್ಕೆ ಹಿಂದಿರುಗಿಸುವುದನ್ನು ಖಚಿತಪಡಿಸಿಕೊಳ್ಳಲು ಅವರ ಪ್ರಯಾಣ ಬಹುಮುಖ್ಯವಾಗಿದೆ.
Spoke to Kuwaiti FM Abdullah Ali Al-Yahya on the fire tragedy in Kuwait.
Apprised of the efforts made by Kuwaiti authorities in that regard. Was assured that the incident would be fully investigated and that responsibility will be fixed.
Urged the early repatriation of the…
— Dr. S. Jaishankar (@DrSJaishankar) June 12, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.