ಹೈದರಾಬಾದ್: ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಿದ ಚಂದ್ರಬಾಬು ನಾಯ್ಡು ಅವರು ಇಂದು ಕುಟುಂಬ ಸಮೇತರಾಗಿ ತಿರುಪತಿ ತಿರುಮಲ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡಿದ್ದಾರೆ. ಅಲ್ಲದೇ ಭ್ರಷ್ಟಾಚಾರ ಮುಕ್ತ ಆಡಳಿತ ಮತ್ತು ಹಿಂದೂ ಧರ್ಮ ರಕ್ಷಣೆ ಮಾಡುವ ಭರವಸೆ ನೀಡಿದ್ದಾರೆ.
ಬಳಿಕ ಮಾತನಾಡಿದ ಅವರು, ದೇಶದ ರಾಜಕೀಯದಲ್ಲಿ ಆಂಧ್ರಪ್ರದೇಶ ಪ್ರಮುಖ ಪಾತ್ರ ವಹಿಸಲಿದೆ. ಇಂದಿನಿಂದ ಉತ್ತಮ ಆಡಳಿತ ಆರಂಭವಾಗಿದೆ. ನೀವು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಈಡೇರಿಸುತ್ತೇನೆ. 2047ರ ವೇಳೆಗೆ ತೆಲುಗು ಜನರು ವಿಶ್ವದಲ್ಲೇ ನಂಬರ್ ಒನ್ ಆಗಬೇಕು. ಆಂಧ್ರಪ್ರದೇಶವನ್ನು ದೇಶದಲ್ಲೇ ನಂಬರ್ ಒನ್ ರಾಜ್ಯವನ್ನಾಗಿ ಮಾಡುತ್ತೇನೆ ಎಂದಿದ್ದಾರೆ.
“ಈ ಹಿಂದೆ ನಕ್ಸಲರಿಂದ ದಾಳಿಯಾದಾಗ ಭಗವಂತ ನನ್ನನ್ನು ರಕ್ಷಿಸಿದನು. ನಾನು ಈ ರಾಜ್ಯದ ಏಳಿಗೆಗಾಗಿ ಪ್ರಾರ್ಥಿಸಿದೆ. ರಾಜ್ಯದಲ್ಲಿ ಆರ್ಥಿಕ ಅಸಮತೋಲನವನ್ನು ಹೋಗಲಾಡಿಸಬೇಕು. ನನ್ನ ಗುರಿ ಸಂಪತ್ತನ್ನು ಸೃಷ್ಟಿಸುವುದು ಮಾತ್ರವಲ್ಲ ಅದನ್ನು ಬಡವರಿಗೆ ಹಂಚುವುದು ಕೂಡ ನನ್ನ ಗುರಿ. ನನ್ನ ಮೊಮ್ಮಗ ದೇವಾಂಶ್ ಹುಟ್ಟಿದ ದಿನದಿಂದಲೂ ನಾನು ಅನ್ನದಾನಕ್ಕೆ ಹಣವನ್ನು ನೀಡುತ್ತಿದ್ದೇನೆ. ನಾನು ಯಾವಾಗಲೂ ಬಡತನ ಮುಕ್ತ ಸಮಾಜಕ್ಕಾಗಿ ಕೆಲಸ ಮಾಡುತ್ತೇನೆ” ಎಂದು ನಾಯ್ಡು ಹೇಳಿದ್ದಾರೆ.
ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಕೌಶಲ್ಯ ಗಣತಿ ಕಾರ್ಯವನ್ನು ಕೈಗೆತ್ತಿಕೊಳ್ಳುವುದು ಮತ್ತು ಅಣ್ಣಾ ಕ್ಯಾಂಟೀನ್ಗಳ ಪುನರುಜ್ಜೀವನಕ್ಕೆ ಸಂಬಂಧಿಸಿದ ಕಡತಗಳನ್ನು ತೆರವುಗೊಳಿಸುವ ನಿರೀಕ್ಷೆಯಿದೆ.
ಬುಧವಾರ ವಿಜಯವಾಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್ಡಿಎಯ ಇತರ ನಾಯಕರ ಸಮ್ಮುಖದಲ್ಲಿ ನಾಯ್ಡು ಅವರು ಆಂಧ್ರಪ್ರದೇಶದ 18 ನೇ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು.
Watch: Andhra Pradesh CM N. Chandrababu Naidu pledges to initiate administrative reforms in Tirumala, says, “I am committed to eliminate corruption and protect Hindu Dharma, which faced issues under the previous government….” pic.twitter.com/Ezv5ZoqFlS
— IANS (@ians_india) June 13, 2024
— Telugu Desam Party (@JaiTDP) June 13, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.