ಅಪುಲಿಯಾ: ಇಟಲಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಭೇಟಿ ಮಾಡಿದರು ಮತ್ತು ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚಿಸಿದ್ದಾರು. ಉಭಯ ನಾಯಕರು ಜಾಗತಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ಇಟಲಿಯ ದಕ್ಷಿಣ ರೆಸಾರ್ಟ್ ಪಟ್ಟಣದಲ್ಲಿ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಉಭಯ ನಾಯಕರು ಭೇಟಿಯಾದರು.
ಈ ತಿಂಗಳು ಮೂರನೇ ಬಾರಿ ಅಧಿಕಾರ ಸ್ವೀಕರಿಸಿದ ನಂತರ ಪ್ರಧಾನಿ ಮೋದಿಯವರ ಮೊದಲ ವಿದೇಶ ಪ್ರವಾಸ ಇದಾಗಿದೆ. ಭಾರತದ 75 ನೇ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಫ್ರೆಂಚ್ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡಿದಾಗ ಉಭಯ ನಾಯಕರು ಕೊನೆಯದಾಗಿ ಜನವರಿಯಲ್ಲಿ ಭೇಟಿಯಾದರು.
ತಮ್ಮ ಕೊನೆಯ ಸಭೆಯ ಸಮಯದಲ್ಲಿ, ಉಭಯ ನಾಯಕರು ದ್ವಿಪಕ್ಷೀಯ ಸಹಕಾರ ಮತ್ತು ಅಂತರಾಷ್ಟ್ರೀಯ ಪಾಲುದಾರಿಕೆಗಾಗಿ ತಮ್ಮ ಹಂಚಿಕೆಯ ದೃಷ್ಟಿಯನ್ನು ಪುನರುಚ್ಚರಿಸಿದರು.
J’ai eu une excellente réunion avec mon ami le Président @EmmanuelMacron. Il s’agit de notre quatrième rencontre en un an, ce qui indique la forte priorité que nous accordons aux liens solides entre l’Inde et la France. Nos échanges ont porté sur de nombreux sujets tels que la… pic.twitter.com/rDsy5FPCHu
— Narendra Modi (@narendramodi) June 14, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.