ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಕೂಡದು ಎಂದು ಹೈಕೋರ್ಟ್ ಆದೇಶ ನೀಡಿದೆ ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ತಿಳಿಸಿದ್ದಾರೆ. ಹೈಕೋರ್ಟಿನ ಈ ಆದೇಶವನ್ನು ಬಿಜೆಪಿ ಸ್ವಾಗತಿಸುತ್ತದೆ ಎಂದು ಹೇಳಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪೋಕ್ಸೊ ಕೇಸಿನಡಿ ಯಡಿಯೂರಪ್ಪ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಪತ್ರಿಕೆಗಳಲ್ಲಿ ಮತ್ತು ಟಿ.ವಿಯಲ್ಲಿ ಸುದ್ದಿ ಬರುತ್ತಿತ್ತು. ಯಡಿಯೂರಪ್ಪ ಅವರಿಗೆ 82 ವರ್ಷವಾಗಿದೆ. ಅವರು ಓಡಿ ಹೋಗುವ ವ್ಯಕ್ತಿ ಅಲ್ಲ. 4 ಬಾರಿ ಮುಖ್ಯಮಂತ್ರಿಗಳಾಗಿ ಕೆಲಸ ಮಾಡಿದ ದೊಡ್ಡ ಜನನಾಯಕ. ಅದೆಲ್ಲ ಇತಿಹಾಸವನ್ನು ಗಮನಿಸಿ ಈ ಆದೇಶ ನೀಡಿದ್ದಾಗಿ ವಿಶ್ಲೇಷಿಸಿದರು.
ಕೇಸನ್ನು ದಾಖಲಿಸಿದ ಮಹಿಳೆ ಯಡಿಯೂರಪ್ಪ ಅವರಿಗೆ ಕೆಟ್ಟ ಹೆಸರು ತರಲು ಮತ್ತು ದ್ವೇಷದ ರಾಜಕಾರಣ ಮಾಡಲು ಇದನ್ನು ದಾಖಲಿಸಲಾಗಿತ್ತು. ಇವುಗಳನ್ನು ಗಮನಿಸಿದ ಹೈಕೋರ್ಟ್ ಆದೇಶ ನೀಡಿದೆ ಎಂದರು. ಇದು ಯಡಿಯೂರಪ್ಪನವರ ದೀರ್ಘ ಹೋರಾಟಕ್ಕೆ ಸಿಕ್ಕಿದ ಜಯ ಎಂದು ಹೇಳಿದರು.
3 ತಿಂಗಳ ಕಾಲ ಏನೂ ಚಟುವಟಿಕೆ ನಡೆದವರು, ಚಾರ್ಜ್ಶೀಟ್ ಮಾಡದವರು, ಈಗ ರಾಹುಲ್ ಗಾಂಧಿ ಮತ್ತು ಸುರ್ಜೇವಾಲಾ ಅವರು ಕರ್ನಾಟಕಕ್ಕೆ ಬಂದು ಹೋದ ಮೇಲೆ ಏಕಾಏಕಿ ಅವರನ್ನು ಬಂಧಿಸಲು ಸರಕಾರ ಮುಂದಾಗಿತ್ತು. ಸರಕಾರ ತನ್ನ ಹುಳುಕುಗಳನ್ನು ಮುಚ್ಚಿಹಾಕಲು ಈ ಷಡ್ಯಂತ್ರ ಮಾಡಿತ್ತು ಎಂಬುದಕ್ಕೆ ಯಾವುದೇ ಅನುಮಾನ ಬೇಡ ಎಂದು ನುಡಿದರು.
ಈ ಸರಕಾರದ ಕೆಟ್ಟ ಉದ್ದೇಶವನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಹೈಕೋರ್ಟಿನ ಆದೇಶವನ್ನು ಬಿಜೆಪಿ ತುಂಬು ಹೃದಯದಿಂದ ಸ್ವಾಗತಿಸುತ್ತದೆ ಎಂದು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.