ನವದೆಹಲಿ: ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET) ಬಗ್ಗೆ ಕಳವಳ ಉದ್ಭವವಾಗಿರುವ ನಡುವೆ ಹೇಳಿಕೆ ನೀಡಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು, ವೈದ್ಯಕೀಯಕ್ಕಾಗಿ ರಾಷ್ಟ್ರವ್ಯಾಪಿ ಪರೀಕ್ಷೆಯನ್ನು ನಡೆಸುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಯಲ್ಲಿ ಸುಧಾರಣೆಗಳ ಅಗತ್ಯವಿದೆ ಎಂದು ಒಪ್ಪಿಕೊಂಡಿದ್ದಾರೆ.
ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಸಚಿವರು, NEET 2024 ಪರೀಕ್ಷೆಗಳಲ್ಲಿ ಅಕ್ರಮ ನಡೆಸಿ ಯಾರಾದರು ತಪ್ಪಿತಸ್ಥರೆಂದು ಕಂಡುಬಂದರೆ NTA ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
“ಸುಪ್ರೀಂ ಕೋರ್ಟ್ನ ಶಿಫಾರಸಿನ ಮೇರೆಗೆ 1,563 ಅಭ್ಯರ್ಥಿಗಳ ಮರುಪರೀಕ್ಷೆಗೆ ಆದೇಶ ನೀಡಲಾಗಿದೆ. ಎರಡು ಸ್ಥಳಗಳಲ್ಲಿ ಕೆಲವು ಅಕ್ರಮಗಳು ಬೆಳಕಿಗೆ ಬಂದಿವೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ನಾನು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಭರವಸೆ ನೀಡುತ್ತೇನೆ” ಎಂದು ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.
ಎನ್ಟಿಎಯ ದೊಡ್ಡ ದೊಡ್ಡ ಅಧಿಕಾರಿಗಳು ಕೂಡ ತಪ್ಪಿತಸ್ಥರೆಂದು ಕಂಡುಬಂದರೂ ಅವರನ್ನು ಬಿಡುವುದಿಲ್ಲ, ಎನ್ಟಿಎಯಲ್ಲಿ ಸಾಕಷ್ಟು ಸುಧಾರಣೆ ಅಗತ್ಯವಿದೆ, ಸರ್ಕಾರಕ್ಕೆ ಈ ಬಗ್ಗೆ ಕಾಳಜಿ ಇದೆ, ಯಾವುದೇ ತಪ್ಪಿತಸ್ಥರನ್ನು ಬಿಡುವುದಿಲ್ಲ, ಅವರಿಗೆ ಕಠಿಣ ಶಿಕ್ಷೆಯಾಗುತ್ತದೆ ಎಂದರು.
NEET-UG ಪರೀಕ್ಷೆಯಲ್ಲಿ 1,563 ಅಭ್ಯರ್ಥಿಗಳಿಗೆ ನೀಡಲಾದ ಗ್ರೇಸ್ ಅಂಕಗಳನ್ನು ರದ್ದುಗೊಳಿಸಲಾಗುವುದು ಮತ್ತು ಅಭ್ಯರ್ಥಿಗಳು ಜೂನ್ 23 ರಂದು ಮತ್ತೊಮ್ಮೆ ಪರೀಕ್ಷೆಯನ್ನು ತೆಗೆದುಕೊಳ್ಳುವ ಆಯ್ಕೆಯನ್ನು ಹೊಂದಿದ್ದಾರೆ ಎಂದು ಕಳೆದ ವಾರ NTA ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ಜೂನ್ 30 ರ ಮೊದಲು ಮರು ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಎಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.