ಶಿವಮೊಗ್ಗ: ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ವಿಧಾನ ಪರಿಷತ್ ಸದಸ್ಯ ಎಂ ಬಿ ಭಾನುಪ್ರಕಾಶ್ ಇಂದು ನಿಧನರಾಗಿದ್ದಾರೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ.
ಶಿವಮೊಗ್ಗ ತಾಲೂಕಿನ ಮತ್ತೂರು ಗ್ರಾಮದ ಎಂ ಬಿ ಭಾನುಪ್ರಕಾಶ್ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕ. 2019 ರಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ ಹಿರಿಮೆ ಕೂಡ ಹೊಂದಿದ್ದಾರೆ. ಅವರು 2001ರಿಂದ 2005ರ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದರು. ಬಳಿಕ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು.
“ನಮ್ಮೆಲ್ಲರ ಹಿರಿಯರು, ಸದಾ ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿ, ನಮ್ಮಂತ ಅನೇಕ ಕಾರ್ಯಕರ್ತರಿಗೆ ಪಕ್ಷದ ತತ್ವ-ಸಿದ್ಧಾಂತಗಳ ಬದ್ಧತೆಯುಳ್ಳ ಹಾಗೂ ಸಾಮಾಜಿಕ ಸೇವಾ ಮನೋಭಾವುಳ್ಳ ಕಾರ್ಯಕರ್ತರನ್ನಾಗಿ ನಿರ್ಮಿಸುವ ನಿಟ್ಟಿನಲ್ಲಿ ಕಳೆದ 4 ದಶಕಗಳಿಂದ ಮಾರ್ಗದರ್ಶನ ಮಾಡುತ್ತಿರುವಂತಹ,ಹಿರಿಯರು, ಮಾಜಿ ವಿಧಾನಪರಿಷತ್ ಸದಸ್ಯರು ಹಾಗೂ ನಿಕಟಪೂರ್ವ ರಾಜ್ಯ ಪ್ರಕೋಷ್ಠ ಸಂಚಾಲಕರಾದ ಶ್ರೀ ಎಂ.ಬಿ.ಭಾನುಪ್ರಕಾಶ್ ಜೀ ಅವರ ನಿಧನ ದುಃಖ ತರಿಸಿದೆ” ಎಂದು ಬಿಜೆಪಿ ಕರ್ನಾಟಕ ಎಕ್ಸ್ ಪೋಸ್ಟ್ ಮಾಡಿದೆ.
ಮಾಜಿ ವಿಧಾನ ಪರಿಷತ್ ಸದಸ್ಯರು, ಬಿಜೆಪಿ ಹಿರಿಯ ನಾಯಕರು ಹಾಗೂ ನಿಕಟಪೂರ್ವ ರಾಜ್ಯ ಪ್ರಕೋಷ್ಠಗಳ ಸಂಯೋಜಕರಾಗಿದ್ದ ಶ್ರೀ ಎಂ. ಬಿ. ಭಾನುಪ್ರಕಾಶ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ.
ಓಂ ಶಾಂತಿಃ pic.twitter.com/KUfUxbrYQn
— BJP Karnataka (@BJP4Karnataka) June 17, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.