ನವದೆಹಲಿ: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಪರಿಸ್ಥಿತಿಯನ್ನು ಅವಲೋಕಿಸಲು ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಕೂಡ ಪರಿಹಾರ ಕಾರ್ಯದ ನೇತೃತ್ವ ವಹಿಸಿದ್ದಾರೆ ಎಂದು ಹೇಳಿದ್ದಾರೆ.
ಅಪಘಾತವನ್ನು ದುಃಖಕರ ಎಂದು ಬಣ್ಣಿಸಿದ ಪ್ರಧಾನಿ, ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದರು.
ಎಕ್ಸ್ ಪೋಸ್ಟ್ ಮಾಡಿರುವ ಪ್ರಧಾನಿ, “ಪಶ್ಚಿಮ ಬಂಗಾಳದ ರೈಲ್ವೆ ಅಪಘಾತವು ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಅಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಸಂತ್ರಸ್ತರಿಗೆ ಸಹಾಯ ಮಾಡಲು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ” ಎಂದಿದ್ದಾರೆ.
ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ನೀಡುವುದಾಗಿ ಪ್ರಧಾನಿ ಕಾರ್ಯಾಲಯವೂ ಘೋಷಿಸಿದೆ.
ಅಸ್ಸಾಂನ ಸಿಲ್ಚಾರ್ನಿಂದ ಕೋಲ್ಕತ್ತಾದ ಸೀಲ್ದಾಹ್ಗೆ ಹೊರಟಿದ್ದ ಕಾಂಚನ್ಜುಂಗಾ ಎಕ್ಸ್ಪ್ರೆಸ್ಗೆ ನ್ಯೂ ಜಲ್ಪೈಗುರಿಯ ಸಮೀಪ ರಂಗಪಾಣಿ ನಿಲ್ದಾಣದ ಬಳಿ ಬೆಳಿಗ್ಗೆ 8.55 ರ ಸುಮಾರಿಗೆ ಗೂಡ್ಸ್ ರೈಲಿಗೆ ಹಿಂಬದಿಯಿಂದ ಢಿಕ್ಕಿಯಾದ ನಂತರ ಮೂವರು ರೈಲ್ವೆ ಸಿಬ್ಬಂದಿ ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 50 ಜನರು ಗಾಯಗೊಂಡಿದ್ದಾರೆ.
The railway accident in West Bengal is saddening. Condolences to those who lost their loved ones. I pray that the injured recover at the earliest. Spoke to officials and took stock of the situation. Rescue operations are underway to assist the affected. The Railways Minister Shri…
— Narendra Modi (@narendramodi) June 17, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.