ಶ್ರೀನಗರ: ಇಂದು ದೇಶಾದ್ಯಂತ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿರುವ ಶೇರ್-ಇ-ಕಾಶ್ಮೀರ್ ಇಂಟರ್ನ್ಯಾಶನಲ್ ಕಾನ್ಫರೆನ್ಸ್ ಸೆಂಟರ್ (ಎಸ್ಕೆಐಸಿಸಿ) ನಲ್ಲಿ ಮುಖ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದಕ್ಕೆ ಚಾಲನೆ ನೀಡಿದರು. ಜೆ & ಕೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಕೇಂದ್ರ ಸಚಿವ ಪ್ರತಾಪ್ರರಾವ್ ಗಣಪತರಾವ್ ಜಾಧವ್ ಮತ್ತು ಇತರ ಅನೇಕ ಗಣ್ಯರು ಪ್ರಧಾನಮಂತ್ರಿಯವರ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಈ ವರ್ಷದ ಥೀಮ್, “ನಮಗಾಗಿ ಮತ್ತು ಸಮಾಜಕ್ಕಾಗಿ ಯೋಗ” ವೈಯಕ್ತಿಕ ಯೋಗಕ್ಷೇಮ ಮತ್ತು ಸಾಮಾಜಿಕ ಸಾಮರಸ್ಯ ಎರಡನ್ನೂ ಬೆಳೆಸುವಲ್ಲಿ ಯೋಗದ ಪ್ರಮುಖ ಪಾತ್ರವನ್ನು ಒತ್ತಿಹೇಳುತ್ತದೆ.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಯನ್ನು ಪೋಷಿಸುವಲ್ಲಿ ಯೋಗದ ಮಹತ್ವವನ್ನು ಎತ್ತಿ ತೋರಿಸಿದರು. ಅಲ್ಲದೇ ಯೋಗ ದಿನಾಚರಣೆಯ ಅಂಗವಾಗಿ ಯೋಗ ಮಾಡಿದ ವಿಶ್ವದಾದ್ಯಂತ ಜನರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು. ಯೋಗ ಪ್ರದರ್ಶನದ ಪ್ರಯೋಜನಗಳ ಬಗ್ಗೆ ಒತ್ತಿ ಹೇಳಿದರು.
ಪ್ರಪಂಚದಾದ್ಯಂತ ಯೋಗ ಮಾಡುವವರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಯೋಗವು ಸಕಾರಾತ್ಮಕ ಶಕ್ತಿಯನ್ನು ನೀಡುವುದರಿಂದ ಜನರು ಯೋಗಕ್ಕೆ ತಮ್ಮನ್ನು ಮುಡಿಪಾಗಿಡುತ್ತಿದ್ದಾರೆ ಎಂದ ಮೋದಿ, 2015ರಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಮನ್ನಣೆ ದೊರೆತಾಗ 177 ರಾಷ್ಟ್ರಗಳು ಈ ದಿನವನ್ನು ಗುರುತಿಸುವ ಭಾರತದ ಪ್ರಸ್ತಾವನೆಯನ್ನು ಬೆಂಬಲಿಸಿದ ಸಮಯವನ್ನು ಸ್ಮರಿಸಿದರು. ತುರ್ಕಮೆನಿಸ್ತಾನದಲ್ಲಿ ಆರಂಭವಾದ ಸಾಂಪ್ರದಾಯಿಕ ಔಷಧ ಮತ್ತು ಯೋಗ ಕೇಂದ್ರದ ಬಗ್ಗೆಯೂ ಮೋದಿ ಪ್ರಸ್ತಾಪಿಸಿದರು.
Interacting with the yoga practioners in Srinagar, J&K. Do watch. https://t.co/WCkPgtiSGx
— Narendra Modi (@narendramodi) June 21, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.