ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಜೂನ್ 21 ರಿಂದ 22 ರವರೆಗೆ ಅಧಿಕೃತ ಪ್ರವಾಸಕ್ಕಾಗಿ ಇಂದು ಭಾರತಕ್ಕೆ ಆಗಮಿಸಿದರು.
ಹೊಸದಾಗಿ ನೇಮಕಗೊಂಡ ರಾಜ್ಯ ಖಾತೆ ಸಚಿವಕೀರ್ತಿವರ್ಧನ್ ಸಿಂಗ್ ಅವರು ಬಾಂಗ್ಲಾದೇಶದ ಪ್ರಧಾನಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.
ಈ ಭೇಟಿಯು ಭಾರತ-ಬಾಂಗ್ಲಾದೇಶ ಬಾಂಧವ್ಯಕ್ಕೆ “ಪ್ರಮುಖ ಉತ್ತೇಜನ” ನೀಡುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕೃತ ವಕ್ತಾರ ರಣಧೀರ್ ಜೈಸ್ವಾಲ್ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
18 ನೇ ಲೋಕಸಭೆ ಚುನಾವಣೆಯ ನಂತರ ಭಾರತದಲ್ಲಿ ಸರ್ಕಾರ ರಚನೆಯಾದ ಬಳಿಕ ಇದು ದೇಶಕ್ಕೆ ಮೊದಲ ದ್ವಿಪಕ್ಷೀಯ ಭೇಟಿಯಾಗಿದೆ ಎಂದು ಸಚಿವಾಲಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಧಾನಿಯವರೊಂದಿಗೆ ದ್ವಿಪಕ್ಷೀಯ ಸಮಾಲೋಚನೆ ನಡೆಸುವುದಲ್ಲದೆ, ಪ್ರಧಾನಿ ಶೇಖ್ ಹಸೀನಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
PM Sheikh Hasina of Bangladesh arrives in New Delhi on a State Visit to India.
Warmly welcomed by MoS @KVSinghMPGonda at the airport.
Bangladesh is a key partner and trusted neighbour of India. The visit will give a major boost to this celebrated bilateral partnership. pic.twitter.com/zSiKijXbBo
— Randhir Jaiswal (@MEAIndia) June 21, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.