ನವದೆಹಲಿ: ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸಲು ಸರ್ಕಾರವು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ವಿಶ್ವವಿದ್ಯಾಲಯ ಧನಸಹಾಯ ಆಯೋಗದ (UGC) ಅಧ್ಯಕ್ಷ ಮಾಮಿದಾಳ ಜಗದೇಶ್ ಕುಮಾರ್ ಹೇಳಿದರು.
NEET-UG ಪರೀಕ್ಷೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವಾಲಯವು ಇತ್ತೀಚೆಗೆ ಕೈಗೊಂಡ ಕ್ರಮಗಳ ಕುರಿತು ಮಾತನಾಡಿದ ಅವರು, ದೇಶದಲ್ಲಿ ಪರೀಕ್ಷೆಗಳ ವಿಶ್ವಾಸಾರ್ಹತೆಯನ್ನು ಕಾಪಾಡಿಕೊಳ್ಳಲು ಸರ್ಕಾರ ಕಳೆದ ಕೆಲವು ದಿನಗಳಲ್ಲಿ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಖ್ಯಾತ ತಜ್ಞರನ್ನೊಳಗೊಂಡ ಸಮಿತಿಯನ್ನೂ ರಚಿಸಲಾಗಿದೆ ಎಂದರು.
ದೆಹಲಿ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊಫೆಸರ್ ಯೋಗೇಶ್ ಸಿಂಗ್ ಕೂಡ ಸರ್ಕಾರದ ಕ್ರಮಗಳನ್ನು ಶ್ಲಾಘಿಸಿದ್ದಾರೆ. “ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಲು ಸರ್ಕಾರ ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ನಂಬಿದ್ದೇನೆ. ಎಲ್ಲ ಜನರು ಸರ್ಕಾರದ ಮೇಲೆ ನಂಬಿಕೆ ಇಡಬೇಕು” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.