ಬೆಂಗಳೂರು: ಇಂದು ನಾಡಪ್ರಭು ಕೆಂಪೇ ಗೌಡ ಅವರ 515ನೇ ಜಯಂತಿಯನ್ನು ಆಚರಿಸಲಾಗಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸರ್ಕಾರದ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಒಕ್ಕಲಿಗ ಸಮುದಾಯದ ಸ್ವಾಮೀಜಿಗಳು, ಒಕ್ಕಲಿಗ ಸಚಿವರು, ಶಾಸಕರು, ನಾಯಕರು ಇದರಲ್ಲಿ ಭಾಗವಹಿಸಿದ್ದರು.
ಅಲ್ಲದೇ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಾಡಪ್ರಭು ಕೆಂಪೇಗೌಡರ 515ನೇ ಜಯಂತ್ಯುತ್ಸವವನ್ನು ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದವು.
ಇನ್ನೊಂದೆಡೆ ಕೆಂಪೇಗೌಡ ಜಯಂತಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ. ಎಕ್ಸ್ ಮಾಡಿರುವ ಮೋದಿ, “ಶ್ರೀ ನಾಡಪ್ರಭು ಕೆಂಪೇಗೌಡರ ಜಯಂತಿಯಂದು ಅವರಿಗೆ ನಮನಗಳು. ಅವರು ದೂರದೃಷ್ಟಿ ಮತ್ತು ಆಡಳಿತ ಕೌಶಲ್ಯಕ್ಕೆ ಹೆಸರುವಾಸಿಯಾದ ದಾರ್ಶನಿಕರಾಗಿದ್ದರು. ಅವರು ಆರ್ಥಿಕ ಯೋಗಕ್ಷೇಮ, ಕೃಷಿ, ನೀರಾವರಿಯ ಪ್ರವರ್ತಕರಾಗಿದ್ದರು. ಅವರು ಪೋಷಿಸಿದ ನಗರವಾದ ಬೆಂಗಳೂರು, ಅದರ ಕ್ರಿಯಾಶೀಲತೆ, ಚೈತನ್ಯ ಮತ್ತು ನಾವೀನ್ಯತೆಗೆ ಜಾಗತಿಕವಾಗಿ ಮೆಚ್ಚುಗೆ ಪಡೆದಿದೆ. ಸಮಾಜಕ್ಕಾಗಿ ಅವರ ದೃಷ್ಟಿಕೋನವನ್ನು ಈಡೇರಿಸಲು ಮತ್ತು ಅವರು ಪಾಲಿಸಿದ ಮೌಲ್ಯಗಳನ್ನು ಎತ್ತಿಹಿಡಿಯಲು ನಮ್ಮ ಸರ್ಕಾರವು ಕೆಲಸ ಮಾಡುತ್ತಲೇ ಇರುತ್ತದೆ. ನಾನು 2022 ರಲ್ಲಿ ‘ಅಭಿವೃದ್ಧಿಯ ಪ್ರತಿಮೆ’ ಉದ್ಘಾಟನೆ ಮಾಡುವ ಗೌರವ ಪಡೆದೆ” ಎಂದಿದ್ದಾರೆ.
Tributes to Sri Nadaprabhu Kempegowda on his birth anniversary. He was a visionary known for his foresight and administrative skills. He was a pioneer in boosting economic wellbeing, agriculture, irrigation and more. Bengaluru, the city he nurtured, is globally admired for its… pic.twitter.com/cckfy5r44u
— Narendra Modi (@narendramodi) June 27, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.