ನವದೆಹಲಿ: ದೆಹಲಿ ಶಾಸಕರ ವೇತನ ಏರಿಕೆಯಾಗುವ ಸಾಧ್ಯತೆ ಇದೆ. ದೆಹಲಿ ಸ್ಪೀಕರ್ ಅವರಿಂದ ನೇಮಿಸಲ್ಪಟ್ಟಿರುವ ಸಮಿತಿ ಶಾಸಕರ ವೇತನವನ್ನು ಶೇ.400ರಷ್ಟು ಹೆಚ್ಚಿಸುವಂತೆ ಶಿಫಾರಸ್ಸು ಮಾಡಿದೆ.
ಪ್ರಸ್ತುತ ಶಾಸಕರ ವೇತನ 82 ಸಾವಿರ ರೂಪಾಯಿ ಇದ್ದು, ಸಮಿತಿ 3.2ಲಕ್ಷ ರೂಪಾಯಿಗೆ ಏರಿಸುವಂತೆ ಶಿಫಾರಸ್ಸು ಮಾಡಿದೆ. ಇದು ದೇಶದಲ್ಲೇ ಶಾಸಕರಿಗೆ ಸಿಗುವ ಅತಿಹೆಚ್ಚು ವೇತನವಾಗಲಿದೆ.
2011ರಲ್ಲಿ ಕೊನೆಯ ಬಾರಿಗೆ ವೇತನ ಪರಿಷ್ಕರಿಸಲಾಗಿತ್ತು, ಶೀಲಾ ದೀಕ್ಷಿತ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಶಾಸಕರ ವೇತನವನ್ನು ಶೇ.100ರಷ್ಟು ಹೆಚ್ಚಿಸಿತ್ತು.
ಹಲವಾರು ಎಎಪಿ ಶಾಸಕರು ತಮಗೆ ಸಿಗುತ್ತಿರುವ ವೇತನದಿಂದ ಮನೆ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಗೋಳಿಟ್ಟು ವೇತನವನ್ನು ಹೆಚ್ಚಿಸುವಂತೆ ಆಗ್ರಹಿಸಿದ್ದರು. ಹೀಗಾಗಿ ಸ್ಪೀಕರ್ ರಾಮ್ ನಿವಾಸ್ ಗೋಯಲ್ ಅವರು ಸ್ವತಂತ್ರ ಸಮಿತಿಯನ್ನು ರಚಿಸಿ ಈ ಬಗ್ಗೆ ವರದಿ ನೀಡುವಂತೆ ತಿಳಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.