ಬೆಂಗಳೂರು: ಗರ್ಭಿಣಿಯರು ಹಾಗೂ ಮಕ್ಕಳ ಆರೋಗ್ಯ ಸುಧಾರಣೆಗೆ ’ಇಂದ್ರಧನುಷ್’ ಎರಡನೇ ಹಂತದ ಸಾರ್ವತ್ರಿಕ ಲಸಿಕಾ ಅಭಿಯಾನ ಅ.7ರಿಂದ ಆರಂಭಗೊಳ್ಳುತ್ತಿದೆ. ಅಕ್ಟೋಬರ್ನಿಂದ ಜನವರಿ ವರೆಗೆ ಪ್ರತಿ ತಿಂಗಳ 7ನೇ ತಾರೀಕಿನಂದು ಲಸಿಕೆ ಹಾಕಲಾಗುತ್ತದೆ. ಈವರೆಗೆ ಯಾವುದೇ ಲಸಿಕೆ ಹಾಕಿಸಿಕೊಳ್ಳದ ಗರ್ಭಿಣಿಯರು, 2 ವರ್ಷದೊಳಗಿನ ಮಕ್ಕಳನ್ನು ಗುರುತಿಸಿ ಲಸಿಕೆ ಹಾಕಿಸುವ ಅಭಿಯಾನ ಇದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
’ಇಂದ್ರಧನುಷ್’ ಲಸಿಕಾ ಆಭಿಯಾನವು ರಾಜ್ಯದ 18 ಜಿಲ್ಲೆಗಳಲ್ಲಿ ಅನುಷ್ಠಾನಗೊಂಡಿದ್ದು, ೨೦೨೦ರ ಒಳಗಾಗಿ ಪೊಲಿಯೋ, ಹೆಪಾಟಿಟಿಸ್ ಬಿ, ಪೆಂಟಾವೇಲೆಂಟ್, ಧನುರ್ವಾಯು ಮೊದಲಾದ ಲಸಿಕೆ ಹಾಕುವ ಅಭಿಯಾನ ಆರಂಭಗೊಂಡಿದೆ.
ತುಮಕೂರು, ಮೈಸೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದ.ಕ., ಉಡುಪಿ ಸೇರಿದಂತೆ ರಾಜ್ಯದ ೧೮ ಜಿಲ್ಲೆಗಳ ಶೇ. ೯೦ರಷ್ಟು ನವಜಾತ ಶಿಶುಗಳು ಹಾಗೂ ಗರ್ಭಿಣಿಯರಿಗೆ ಲಸಿಕೆ ಹಾಕಲಾಗುವುದು ಎಂದು ಸಚಿವ ಖಾದರ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.