ನವದೆಹಲಿ: ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗುವ NEET, ಪ್ರಾಧ್ಯಪಕ ಹುದ್ದೆಗಳಿಗೆ ನಡೆಸಲಾಗುವ UG-NET ಪರೀಕ್ಷೆಗಳಲ್ಲಿ ಅನೇಕ ಅಕ್ರಮಗಳು ನಡೆಯುತ್ತಿರುವ ಬಗ್ಗೆ ಇತ್ತೀಚಿಗೆ ವರದಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ನಡೆಸುವ ಕೇಂದ್ರೀಯ ಸಂಸ್ಥೆಯಾದ ರಾಷ್ಟ್ರೀಯ ಪರೀಕ್ಷಾ ಮಂಡಳಿಯನ್ನು ಸುಧಾರಿಸಲು ಅಥವಾ ಪುನರ್ರಚಿಸಲು ಸರ್ಕಾರ ಸಮಿತಿಯೊಂದನ್ನು ರಚನೆ ಮಾಡಿದೆ. ಈ ಸಮಿತಿಯು ಎನ್ಟಿಎಯ ಸುಧಾರಣೆಗೆ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಸಲಹೆಗಳನ್ನು ಕೇಳಿದೆ.
ಇಸ್ರೋ ಮಾಜಿ ಅಧ್ಯಕ್ಷ ಡಾ ಕೆ ರಾಧಾಕೃಷ್ಣನ್ ನೇತೃತ್ವದ ಸಮಿತಿಯು ವಿಶೇಷ ವೆಬ್ಸೈಟ್ ಮೂಲಕ ಸಲಹೆಗಳು ಮತ್ತು ಪ್ರತಿಕ್ರಿಯೆಗಳನ್ನು ಸ್ವೀಕರಿಸಲು ಸಿದ್ಧರಾಗಿದ್ದು – https://innovateindia.mygov.in/examination-reforms-nta/ ಅಲ್ಲಿ ಸಲಹೆ ಸೂಚನೆಗಳನ್ನು ಸಲ್ಲಿಕೆ ಮಾಡಬಹುದು.
ಸಾರ್ವಜನಿಕರು ಜುಲೈ 7ರವರೆಗೆ ಪ್ರತಿಕ್ರಿಯೆ ನೀಡಬಹುದು.
ಈ ನಡುವೆ NEET ಮತ್ತು NET ವಿವಾದಗಳ ಬಗ್ಗೆ ಪ್ರತಿಪಕ್ಷಗಳು, ವಿಶೇಷವಾಗಿ ಕಾಂಗ್ರೆಸ್ ನೇತೃತ್ವದ ಇಂಡಿ ಬ್ಲಾಕ್ ಮತ್ತು ಆಡಳಿತಾರೂಢ ಬಿಜೆಪಿಯ ನಡುವೆ ಜಟಾಪಟಿ ಏರ್ಪಟ್ಟಿದ್ದು, ಇಂದು ಸಂಸತ್ತಿನ ಎರಡೂ ಕಲಾಪಗಳಲ್ಲಿ ಗದ್ದಲ ಉಂಟಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.