ನವದೆಹಲಿ: ಪ್ರಸ್ತುತ ಉಪ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಸೇವೆ ಸಲ್ಲಿಸುತ್ತಿರುವ ಭಾರತೀಯ ವಿದೇಶಾಂಗ ಸೇವೆಯ 1989 ರ ಬ್ಯಾಚ್ ಅಧಿಕಾರಿ ವಿಕ್ರಮ್ ಮಿಸ್ರಿ ಅವರು ಭಾರತದ ಹೊಸ ವಿದೇಶಾಂಗ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.
ವಿಕ್ರಮ್ ಮಿಶ್ರಿ ಅವರನ್ನು ಮುಂದಿನ ವಿದೇಶಾಂಗ ಕಾರ್ಯದರ್ಶಿಯನ್ನಾಗಿ ನೇಮಿಸಲು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಡಿದ ಪ್ರಸ್ತಾವನೆಯನ್ನು ಕ್ಯಾಬಿನೆಟ್ ನೇಮಕಾತಿ ಸಮಿತಿ (ಎಸಿಸಿ) ಅನುಮೋದಿಸಿದೆ. ವಿನಯ್ ಮೋಹನ್ ಕ್ವಾತ್ರಾ ಅವರ ಅಧಿಕಾರವಧಿ ಮುಗಿದ ಬಳಿಕ ವಿದೇಶಾಂಗ ಕಾರ್ಯದರ್ಶಿಯಾಗಲಿದ್ದಾರೆ.
ಕ್ವಾತ್ರಾಗೆ ನೀಡಲಾದ ವಿಸ್ತರಣೆ ಜುಲೈ 14 ರಂದು ಕೊನೆಗೊಳ್ಳಲಿದ್ದು, ಜುಲೈ 15 ರಂದು ವಿದೇಶಾಂಗ ಕಾರ್ಯದರ್ಶಿಯಾಗಿ ಮಿಸ್ರಿ ಅವರ ಅಧಿಕಾರಾವಧಿ ಪ್ರಾರಂಭವಾಗಲಿದೆ.
ನ್ಯಾಶನಲ್ ಸೆಕ್ಯುರಿಟಿ ಕೌನ್ಸಿಲ್ ಸೆಕ್ರೆಟರಿಯೇಟ್ನಲ್ಲಿ ಉಪ ರಾಷ್ಟ್ರೀಯ ಭದ್ರತಾ ಸಲಹೆಗಾರರಾದ ವಿಕ್ರಮ್ ಮಿಸ್ರಿ ಅವರು ಐಎಫ್ಎಸ್ 1989 ಬ್ಯಾಚ್ ಅಧಿಕಾರಿ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.