ಬೆಂಗಳೂರು: ನಗರದ ಅರಮನೆ ಮೈದಾನದ ಗೇಟ್ ನಂಬರ್ 3, ವೈಟ್ ಪೆಟಲ್ಸ್ನಲ್ಲಿ ಇದೇ 4ರಂದು ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿ ನಡೆಯಲಿದೆ. ಕಾರ್ಯಕಾರಿಣಿಗೆ 1,745 ಜನ ಅಪೇಕ್ಷಿತರಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಅವರು ತಿಳಿಸಿದರು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಬಳಿಕ ನಮ್ಮ ಪಕ್ಷದ ಮಂಡಲದ ಅಧ್ಯಕ್ಷರಿಂದ ಮೇಲ್ಪಟ್ಟ ಎಲ್ಲ ಪದಾಧಿಕಾರಿಗಳು, ಜಿಲ್ಲಾ- ರಾಜ್ಯ ಪದಾಧಿಕಾರಿಗಳು ಸಭೆಗೆ ಅಪೇಕ್ಷಿತರಿದ್ದಾರೆ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಅಧ್ಯಕ್ಷತೆ ವಹಿಸುವರು. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ವಿಶೇಷ ಆಹ್ವಾನಿತರಿದ್ದು, ರಾಜ್ಯದ ಚುನಾವಣಾ ಉಸ್ತುವಾರಿ ಆಗಿದ್ದ ರಾಧಾಮೋಹನ್ ಅಗರ್ವಾಲ್ ಅವರೂ ಭಾಗವಹಿಸುವರು. ಪ್ರತಿಯೊಂದು ಬೂತ್ ಮಟ್ಟಕ್ಕೂ ಹಲವಾರು ವಿಚಾರಗಳನ್ನು ತಿಳಿಸುವುದು ಈ ಕಾರ್ಯಕಾರಿಣಿಯ ವಿಶೇಷತೆ ಎಂದರು.
ರಾಜ್ಯ ಸರಕಾರದ ವೈಫಲ್ಯಗಳ ಕುರಿತು ಒಂದು ನಿರ್ಣಯ ಅಂಗೀಕರಿಸಲಾಗುವುದು. ಮೂರನೇ ಬಾರಿ ಪ್ರಧಾನಿಯಾಗಿರುವ ನರೇಂದ್ರ ಮೋದಿಯವರಿಗೆ, ಕೇಂದ್ರ ಸರಕಾರವನ್ನು ಅಭಿನಂದಿಸುವ ಇನ್ನೊಂದು ನಿರ್ಣಯ ಅಂಗೀಕರಿಸಲಿದ್ದೇವೆ ಎಂದು ವಿವರ ನೀಡಿದರು.
ಇದೇ 5 ಮತ್ತು 6ರಂದು ಸೋತ ಲೋಕಸಭಾ ಕ್ಷೇತ್ರಗಳ ಅವಲೋಕನ ಸಭೆಯನ್ನು ರಾಜ್ಯಾಧ್ಯಕ್ಷರು ನಡೆಸುತ್ತಾರೆ. ಆ ಲೋಕಸಭಾ ಕ್ಷೇತ್ರಗಳ ಸಮಿತಿಗಳು, ಅಭ್ಯರ್ಥಿ, ವ್ಯಾಪ್ತಿಯ ಶಾಸಕರು, ಮಾಜಿ ಶಾಸಕರು ಭಾಗವಹಿಸಲಿದ್ದಾರೆ ಎಂದು ಪ್ರಶ್ನೆಗೆ ಉತ್ತರಿಸಿದರು. ಯಾಕೆ ವಿಫಲವಾದೆವು ಎಂಬ ಬಗ್ಗೆ ಚರ್ಚೆ ಮಾಡಿ ಅಧ್ಯಕ್ಷರು ಮಾಹಿತಿ ಪಡೆಯುತ್ತಾರೆ ಎಂದು ಹೇಳಿದರು.
ರಾಜ್ಯ ವಕ್ತಾರ ಎಚ್.ವೆಂಕಟೇಶ ದೊಡ್ಡೇರಿ, ಬೆಂಗಳೂರು ಉತ್ತರ ಜಿಲ್ಲಾ ಅಧ್ಯಕ್ಷ ಎಸ್.ಹರೀಶ್ ಅವರು ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.