ನವದೆಹಲಿ: ಇಂದು ಭಾರತೀಯ ಜನಸಂಘದ ಸಂಸ್ಥಾಪಕ ಡಾ ಶ್ಯಾಮ ಪ್ರಸಾದ್ ಮುಖರ್ಜಿ ಅವರ ಜನ್ಮದಿನ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಗೌರವ ಸಲ್ಲಿಸಿದ್ದಾರೆ.
ಎಕ್ಸ್ ಪೋಸ್ಟ್ ಮಾಡಿರುವ ಮೋದಿ, ಡಾ. ಮುಖರ್ಜಿ ಅವರು ತಮ್ಮ ಬಲವಾದ ರಾಷ್ಟ್ರೀಯತಾವಾದಿ ಚಿಂತನೆಗಳಿಂದ ಭಾರತವನ್ನು ಹೆಮ್ಮೆಪಡುವಂತೆ ಮಾಡಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ. ಮಾತೃಭೂಮಿಗಾಗಿ ಅವರ ಸಮರ್ಪಣೆ ಮತ್ತು ತ್ಯಾಗ ಯಾವಾಗಲೂ ದೇಶವಾಸಿಗಳಿಗೆ ಸ್ಫೂರ್ತಿ ನೀಡುತ್ತದೆ ಎಂದು ಅವರು ಹೇಳಿದರು.
ಅಮಿತ್ ಶಾ ಅವರು, ದೇಶದ ಏಕತೆ ಮತ್ತು ಸಮಗ್ರತೆಗಾಗಿ ಹೋರಾಡುವ ಮಾತು ಬಂದಾಗಲೆಲ್ಲಾ ಡಾ.ಮುಖರ್ಜಿಯವರು ಖಂಡಿತವಾಗಿಯೂ ನೆನಪಾಗುತ್ತಾರೆ ಎಂದು ಹೇಳಿದ್ದಾರೆ.
ಡಾ.ಮುಖರ್ಜಿ ಅವರು ಜನಸಂಘದ ಸ್ಥಾಪನೆಯೊಂದಿಗೆ ದೇಶಕ್ಕೆ ಸೈದ್ಧಾಂತಿಕ ಪರ್ಯಾಯಗಳನ್ನು ಒದಗಿಸಿದರು ಮತ್ತು ದೀರ್ಘಕಾಲದವರೆಗೆ ರಾಷ್ಟ್ರದ ಹಾದಿಯಲ್ಲಿ ಮಾರ್ಗದರ್ಶಿಯಾಗಿ ಉಳಿಯುತ್ತಾರೆ ಎಂದು ಹೇಳಿದ್ದಾರೆ.
अपने प्रखर राष्ट्रवादी विचारों से मां भारती को गौरवान्वित करने वाले डॉ. श्यामा प्रसाद मुखर्जी को उनकी जन्म-जयंती पर आदरपूर्ण श्रद्धांजलि। मातृभूमि के लिए उनका समर्पण और त्याग देशवासियों को सदैव प्रेरित करता रहेगा। pic.twitter.com/QYELTn45fb
— Narendra Modi (@narendramodi) July 6, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.